Thursday, June 4, 2026
Homeಉದ್ಯಮಬಯೊಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾಗೆ ಕೊರೋನಾ ಪಾಸಿಟಿವ್

ಬಯೊಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾಗೆ ಕೊರೋನಾ ಪಾಸಿಟಿವ್

- Advertisement -
- Advertisement -

ಬೆಂಗಳೂರು: ಬಯೊಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ತಮಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು ಸಣ್ಣಮಟ್ಟಿನ ರೋಗಲಕ್ಷಣವಿದೆ ಎಂದು ಕಿರಣ್ ಮಜುಂದಾರ್ ಶಾ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಸಂಸದ ಶಶಿ ತರೂರ್‌, ‘ ಈ ವಿಷಯ ತಿಳಿಯಲು ಬೇಸರವಾಗುತ್ತಿದೆ, ಶೀಘ್ರವೇ ಗುಣಮುಖರಾಗಿ ಮತ್ತು ಧೃಢಕಾಯರಾಗಿ ಮರಳಲು ಆಶಿಸುತ್ತೇವೆ. ಆರೋಗ್ಯದಿಂದಿರು ಗೆಳತಿ’ ಎಂದಿದ್ದಾರೆ.

ಇತ್ತೀಚೆಗಷ್ಟೇ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಆರೋಗ್ಯ ಸಚಿವ ಬಿ.ಶ್ರೀರಾಮುಲು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಶಾಸಕರು, ಸಂಸದರಿಗೆ ಕೊರೊನಾ ವೈರಸ್‌ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆದಿದ್ದಾರೆ.

- Advertisement -

Latest News

error: Content is protected !!