Thursday, July 16, 2026
Homeಕರಾವಳಿರಸ್ತೆಗೆ ಉರುಳಿದ ಮರ: ಬಿಸಿಲೆ-ಸುಬ್ರಮಣ್ಯ ಸಂಚಾರ ಬಂದ್

ರಸ್ತೆಗೆ ಉರುಳಿದ ಮರ: ಬಿಸಿಲೆ-ಸುಬ್ರಮಣ್ಯ ಸಂಚಾರ ಬಂದ್

- Advertisement -
- Advertisement -

ಸುಬ್ರಹ್ಮಣ್ಯ: ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಜೋರಾಗಿರುವ ಕಾರಣ ರಸ್ತೆಗೆ ಮರ ಉರುಳಿ ಬಿದ್ದ ಕಾರಣ ಸಂಚಾರ ಸ್ಥಗಿತಗೊಂಡಿದೆ. ರಸ್ತೆಗೆ ಅಡ್ಡಲಾಗಿ ಮರ ಬಿದ್ದಿರುವ ಕಾರಣ ಬಿಸಿಲೆ – ಸುಬ್ರಹ್ಮಣ್ಯ ನಡುವೆ ಸಂಚಾರ ಬಂದ್ ಆಗಿದೆ. ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಿಸಿಲೆ ಸಮೀಪ ರಸ್ತೆಗೆ ಮರ ಉರುಳಿದೆ.‌ ಇದರಿಂದ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಸಂಚಾರ ಸಮಸ್ಯೆ ಉಂಟಾಗಿರುವ ಕಾರಣ ವಾಹನ ಸುಗಮ ಸಂಚಾರಕ್ಕೆ ಅಡ್ಡಿಯುಂಟಾಗಿದೆ‌. ಲೋಕೋಪಯೋಗಿ ಇಲಾಖೆ ಸಿಬ್ಬಂದಿಯಿಂದ ಮರ ತೆರವುಗೊಳಿಸುವ ಕಾರ್ಯ ಆರಂಭವಾಗಿದ್ದು, ಶೀಘ್ರದಲ್ಲೇ ಬಿಸಿಲೆ – ಸುಬ್ರಮಣ್ಯ ನಡುವಿನ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಸಕಲೇಶಪುರ ತಾಲ್ಲೂಕಿನಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ.

- Advertisement -

Latest News

error: Content is protected !!