Sunday, April 28, 2024
Homeಕರಾವಳಿವಿಟ್ಲದಲ್ಲಿ 5 ಅಡಿ ಆಳದ ನೀರಿನ ಟ್ಯಾಂಕ್ ಗೆ ಬಿದ್ದ ಕಾಡುಕೋಣ; ಅರಣ್ಯ ಇಲಾಖೆಯಿಂದ ರಕ್ಷಣೆ

ವಿಟ್ಲದಲ್ಲಿ 5 ಅಡಿ ಆಳದ ನೀರಿನ ಟ್ಯಾಂಕ್ ಗೆ ಬಿದ್ದ ಕಾಡುಕೋಣ; ಅರಣ್ಯ ಇಲಾಖೆಯಿಂದ ರಕ್ಷಣೆ

spot_img
- Advertisement -
- Advertisement -

ವಿಟ್ಲ: ಕಾಡಿನಿಂದ ನೀರು ಕುಡಿಯಲು ಬಂದ ಕಾಡುಕೋಣವೊಂದು ನೀರಿನ ಟ್ಯಾಂಕ್ ಗೆ ಬಿದ್ದ ಘಟನೆ ಕನ್ಯಾನದಲ್ಲಿ ನಡೆದಿದೆ.


ಕಳೆಂಜೆಮಲೆ ರಕ್ಷಿತಾರಣ್ಯ ಕಾಡಿನಿಂದ ಕಾಡುಕೋಣ ನೀರು ಹುಡುಕಿಕೊಂಡು ನಾಡಿಗೆ ಬಂದಿದೆ. ಕನ್ಯಾನ ಭಾರತ ಸೇವಾಶ್ರಮದ ನೀರಿನ ಟ್ಯಾಂಕ್ ನಲ್ಲಿ ನೀರು ಕುಡಿಯಲು ಯತ್ನಿಸಿದಾಗ ನೇರವಾಗಿ ಕೋಣ ಟ್ಯಾಂಕ್ ಗೆ ಜಾರಿ ಬಿದ್ದಿದೆ. ಇದರಿಂದ ಮೇಲೆ ಏಳಲಾಗದೇ ಟ್ಯಾಂಕ್ ಒಳಗಡೆ ಕೋಣ ಬಾಕಿಯಾಗಿದೆ.


ಮಧ್ಯರಾತ್ರಿ ಈ ಘಟನೆ ಸಂಭವಿಸಿದ್ದು, ಬೆಳಿಗ್ಗೆ ಆಶ್ರಮ ನಿವಾಸಿಗಳು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ವಿಟ್ಲ ಶಾಖೆಯ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಕಾರ್ಯಾಚರಣೆ ಮುಂದುವರಿಸಿದ್ದಾರೆ. ಟ್ಯಾಂಕ್ ನಿಂದ ನೀರು ಖಾಲಿ ಮಾಡಿ, ಅದರ ಮೂಲಕ ಕೋಣವನ್ನು ರಕ್ಷಿಸಲಾಗಿದೆ.


ಟ್ಯಾಂಕ್ 5 ಅಡಿ ಆಳವಿದ್ದು ಕೋಣಕ್ಕೆ ಯಾವುದೇ ಗಾಯಗಳಾಗಿಲ್ಲ ಎಂದು ಅರಣ್ಯ ಸಿಬ್ಬಂದಿಗಳು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!