Sunday, May 19, 2024
Homeತಾಜಾ ಸುದ್ದಿಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣ ಅಂದರ್

ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣ ಅಂದರ್

spot_img
- Advertisement -
- Advertisement -

ಬೆಂಗಳೂರು; ದೇಶದಾದ್ಯಂತ  ಸಂಚಲನ ಸೃಷ್ಟಿಸಿದ್ದ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಬೆಂಗಳೂರು ಬಳ್ಳಾರಿ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಅಲ್ಲಿ ಶ್ರೀಕಿಯನ್ನ ಬಂಧಿಸಲಾಗಿದೆ.

2017ರಲ್ಲಿ ತುಮಕೂರು ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್​ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 1.14 ಲಕ್ಷ ಮೌಲ್ಯದ 60.6 ಬಿಟ್ ಕಾಯಿನ ಕಳುವು ಆಗಿರುವ ಕುರಿತು ಆರೋಪ ಕೇಳಿಬಂದಿತ್ತು. ಪ್ರೀತಿ ಲ್ಯಾಪ್ಟಾಪ್ ಪರಿಶೀಲನೆ ವೇಳೆ ಬಿಟ್ ಕಾಯಿನ್ ಕಳುವಾಗಿರುವುದು ದೃಢವಾಗಿದೆ.

ಯುನೋಕಾಯಿನ್ ಪ್ರೈ. ಲಿ. ಗ್ರಾಹಕರಿಗೆ ಈ ಬಿಟ್ ಕಾಯಿನ್ ಸೇರಿದ್ದು ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಇದೀಗ ಪ್ರಮುಖ ಆರೋಪಿಯಾದ ಶ್ರೀಕಿಯನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣ ಎಸ್​ಐಟಿಗೆ ವರ್ಗಾವಣೆ ಆಗಿತ್ತು.

ಈ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದರು.ಬಳಿಕ ಜಾಮೀನಿನ ಮೇಲೆ ಹೊರಗಡೆ ಬಂದಿದ್ದನು. ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿ ಸಿಐಡಿ ತನಿಖೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದನು.ಸಿಐಡಿ ಪೊಲೀಸರು 5-6 ಬಾರಿ ನೋಟಿಸ್ ನೀಡಿದರೂ ಶ್ರೀಕಿ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ. ಇದೀಗ ಸಿಐಡಿ ಅಧಿಕಾರಿಗಳು ಶ್ರೀಕಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -
spot_img

Latest News

error: Content is protected !!