- Advertisement -
- Advertisement -
ಕಡಬ: ಹಾವು ಕಡಿದು ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಇಚಿಲಂಪಾಡಿಯಲ್ಲಿ ನಡೆದಿದೆ.
ಬಿಜೇರು ನಿವಾಸಿ ನಾರಾಯಣ ಶೆಟ್ಟಿ ಮೃತ ವ್ಯಕ್ತಿ.ಅ.7 ರಂದು ಗದ್ದೆಯ ಬದಿಯಲ್ಲಿ ಹಾದು ಹೋಗುತ್ತಿದ್ದಾಗ ಯಾವುದೊ ವಿಷಕಾರಿ ಹಾವು ಕಡಿದ ಅನುಭವವಾಗಿದೆ. ಕೂಡಲೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಯುರ್ವೇದಿಕ್ ಪಂಡಿತರ ಬಳಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿತ್ತು.ಆದರೆ ಇಂದು ಗಾಯ ಉಲ್ಬಣಿಸಿದ ಕಾರಣ ತೀವ್ರ ರಕ್ತ ಸ್ರಾವವಾಗಿದ್ದು,ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ಸಂದರ್ಭ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಮೃತರು ತಾಯಿ, ಪತ್ನಿ ಹಾಗು ಇಬ್ಬರು ಮಕ್ಕಳನ್ನು ಅಗಲಿದ್ದಾರೆ ಇವರ ಅಂತ್ಯಕ್ರಿಯೆ ಇಂದು ಅವರ ಸ್ವಗೃದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
- Advertisement -