Thursday, June 25, 2026
Homeಕರಾವಳಿದ.ಕ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಗೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಅಭಿನಂದನೆ

ದ.ಕ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಗೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಅಭಿನಂದನೆ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಲಾಗಿದೆ.

ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಗೆ ಇಂದು ಬೆಳಗ್ಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಮತ್ತು ಕಚೇರಿ ಸಿಬ್ಬಂದಿ ಬ್ರಿಜೇಶ್ ಚೌಟ ಅವರನ್ನು ಅಭಿನಂದಿಸಿದರು‌.

ಬಿಜೆಪಿ ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯ ಕಾರ್ಯಾಲಯ ಸಹ ಕಾರ್ಯದರ್ಶಿ ವಿಶ್ವನಾಥ ಅಣಜಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ನಿನ್ನೆ ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟ ಬಳಿಕ ಇಂದು ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದರು.

ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿಯೂ ಕ್ಯಾ. ಬ್ರಿಜೇಶ್ ಚೌಟ ಕಾರ್ಯ ನಿರ್ವಹಿಸುತ್ತಿದ್ದಾರೆ.

- Advertisement -

Latest News

error: Content is protected !!