Thursday, June 4, 2026
Homeತಾಜಾ ಸುದ್ದಿಸಿದ್ದರಾಮಯ್ಯ ಮನೆ ಬಳಿ ಚಡ್ಡಿ ಆಂದೋಲನ : ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶ

ಸಿದ್ದರಾಮಯ್ಯ ಮನೆ ಬಳಿ ಚಡ್ಡಿ ಆಂದೋಲನ : ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶ

- Advertisement -
- Advertisement -

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನೆಯ ಬಳಿ ಚಡ್ಡಿ ಆಂದೋಲನ ನಡೆಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಪಠ್ಯ ವಿವಾದದ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಕುರಿತಾಗಿ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ರಾಜ್ಯಾದ್ಯಂತ ಚಡ್ಡಿ ಸುಡುವ ಅಭಿಯಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಇಂದು  ಬಿಜೆಪಿ ಕಾರ್ಯಕರ್ತರು ಕುಮಾರಪಾರ್ಕ್ ನಲ್ಲಿರುವ ಸಿದ್ದರಾಮಯ್ಯ ನಿವಾಸದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಸಂದರ್ಭದಲ್ಲಿ ಚಡ್ಡಿಯನ್ನು ಸಾಂಕೇತಿಕವಾಗಿ ಪ್ರದರ್ಶನ ಮಾಡಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

- Advertisement -

Latest News

error: Content is protected !!