- Advertisement -
- Advertisement -
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದು ಖಚಿತವಾಗಿದೆ. ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಂಗಳೂರಿನಲ್ಲಿ ಖಚಿತ ಪಡೆದಿದ್ದಾರೆ.
ಮೈತ್ರಿ ಸಂಬಂಧವಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಲೋಕಸಭಾ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ಬಗ್ಗೆ ಅಮಿತ್ ಷಾ ಒಪ್ಪಿಗೆ ಸೂಚಿಸಿದ್ದು ಬಿಜೆಪಿ ರಾಜ್ಯ ಘಟಕಕ್ಕೆ ಕೂಡಾ ಮಾಹಿತಿ ರವಾನಿಸಿದ್ದಾರೆ.
ಹಾಸನ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ಬಗ್ಗೆ ಮಾತುಕತೆ ನಡೆದಿದೆ.
- Advertisement -