- Advertisement -
- Advertisement -
ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಸುಳ್ಯ ತಾಲೂಕಿನ ವಿವಿಧೆಡೆ ಭೇಟಿ ನೀಡಿ ಮತಯಾಚನೆ ನಡೆಸಿದರು.
ಕನಕಮಜಲಿನ ಆತ್ಮಾರಾಮ ಭಜನಾ ಮಂದಿರ, ಮಂಡೆಕೋಲು ಸಹಕಾರಿ ಬ್ಯಾಂಕ್, ಸುಳ್ಯದ ಕೆವಿಜಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದ ಅಭ್ಯರ್ಥಿ ಚೌಟ ಮತಯಾಚನೆ ಮಾಡಿದರು.
ಇದೇ ವೇಳೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ವಕೀಲರ ಜೊತೆ ಸಂವಾದ ನಡೆಸಿದ ಬ್ರಿಜೇಶ್ ಚೌಟ, ನಿವೃತ್ತ ಸೈನಿಕ ಅಡ್ಡಂತಡ್ಕ ದೇರಣ್ಣ ಗೌಡ ಅವರನ್ನೂ ಭೇಟಿ ಮಾಡಿ ಆಶೀರ್ವಾದ ಪಡೆದರು.
ಇದೇ ವೇಳೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.
- Advertisement -