- Advertisement -
![]()
- Advertisement -
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪ್ರೊ.ಎಂ.ನಾಗರಾಜ್ ಹಾಗೂ ವಿಧಾನ ಪರಿಷತ್ ಸ್ಥಾನಗಳಿಗೆ ಪಕ್ಷದ ಅಭ್ಯರ್ಥಿಗಳಾದ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರು ಇಂದು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್.ಅಶ್ವತ್ಥನಾರಾಯಣ್, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ವಿಧಾನಸಭೆಯ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಜಿ. ಪಾಟೀಲ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದು ಅಭ್ಯರ್ಥಿಗಳಿಗೆ ಶುಭ ಹಾರೈಸಿದರು.
- Advertisement -


