Friday, April 18, 2025
Homeಕರಾವಳಿಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ‘ಸಂವಿಧಾನ ಬದಲು' ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪತ್ರಿಭಟನೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ‘ಸಂವಿಧಾನ ಬದಲು’ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪತ್ರಿಭಟನೆ

spot_img
- Advertisement -
- Advertisement -

ಮಂಗಳೂರು: ‘ಸಂವಿಧಾನ ಬದಲು’ ಮಾಡುವಂತೆ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ನೀಡಿದಂತಹ ಹೇಳಿಕೆ ಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರದಂದು ನಗರದ ಕುದ್ಮುಲ್ ರಂಗರಾವ್ ಪುರಭವನ ಎದುರಿನ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು.

ಈ ವೇಳೆ ಬಿಜೆಪಿ ಕಾರ್ಯಕರ್ತರು ಡಿ.ಕೆ. ಶಿವಕುಮಾರ್, ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ದೇಶದ ಜನರ ಎದುರು ಕ್ಷಮೆ ಕೇಳುವಂತೆ ಪ್ರತಿಭಟನಕಾರರು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಡಾ| ವೈ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸದಸ್ಯರಾದ ಕ್ಯಾ| ಗಣೇಶ್ ಕಾರ್ಣಿಕ್ ಮೋನಪ್ಪ ಭಂಡಾರಿ, ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷೆ ಡಾ| ಮಂಜುಳಾ ರಾವ್, ಯುವ ಮೋರ್ಚ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಗನ್ನಾಥ ಬೆಳುವಾಯಿ, ಗಣೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧಡೆಯಿಂದ ಪಕ್ಷಕ ವಿವಿಧ ಪದಾಧಿಕಾರಿಗಳು, ಮನಪಾ ಮಾಜಿ ಸದಸ್ಯರು, ಕಾರ್ಯಕರ್ತರು ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!