ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಏಪ್ರಿಲ್ 10 ಸೋಮವಾರದಂದು ಪ್ರಕಟವಾಗಲಿದೆ ಎನ್ನಲಾಗುತ್ತಿದೆ. ಬಹುತೇಕ ಭಾನುವಾರ ರಾತ್ರಿ ಅಂತಿಮಗೊಳ್ಳಲಿದ್ದು, ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ರಾಜ್ಯ ಪ್ರವಾಸ ಕೈಗೊಂಡಿದ್ದು, ಮೋದಿ ರಾಜ್ಯಪ್ರವಾಸದ ಬಳಿಕ ಭಾನುವಾರ ರಾತ್ರಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಿ ಸೋಮವಾರ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸುಮಾರು 100 ಕ್ಕೂ ಹೆಚ್ಚು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇರಲಿದ್ದು, ಕೆಲವು ಹಾಲಿ ಶಾಸಕರನ್ನು ಪಟ್ಟಿಯಿಂದ ಕೈಬಿಟ್ಟು 2 ನೇ ಪಟ್ಟಿಗೆ ಪರಿಗಣಿಸಬಹುದು ಎನ್ನಲಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. ಆದ್ರೇ ಬಿಜೆಪಿಯಿಂದ ಇನ್ನೂ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿಲ್ಲ. ಹೀಗಾಗಿ ಶುಕ್ರವಾರ ದೆಹಲಿಯಲ್ಲಿ ಬಿಜೆಪಿ ನಾಯಕರು ಪಟ್ಟಿ ಬಿಡುಗಡೆಗಾಗಿ ಕಸರತ್ತು ನಡೆಸುತ್ತಿದ್ದಾರೆ.ಈ ಸಂಬಂಧ ದೆಹಲಿಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ಬಿಜೆಪಿ ಮುಖಂಡರು ಸಭೆ ನಡೆಸುತ್ತಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಿಸಿಕೊಂಡು ಬರೋದಕ್ಕಾಗಿ ತೆರಳಿದ್ದಾರೆ. ದೆಹಲಿಯ ಜೆಪಿ ನಡ್ಡಾ ಅವರ ನಿವಾಸದಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡೋದಕ್ಕಾಗಿ ಬಿಸಿ ಬಿಸಿ ಚರ್ಚೆ ನಡೆಸಿದ್ದಾರೆ.