Saturday, June 13, 2026
Homeತಾಜಾ ಸುದ್ದಿಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ:  ಬಿಜೆಪಿಯಿಂದ ಬಸವರಾಜ್ ಹೊರಟ್ಟಿ ಸ್ಪರ್ಧೆ

ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ:  ಬಿಜೆಪಿಯಿಂದ ಬಸವರಾಜ್ ಹೊರಟ್ಟಿ ಸ್ಪರ್ಧೆ

- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪ್ರಕಟ ಬೆನ್ನಲ್ಲೇ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕೂಡ ಬಿಜೆಪಿ ಅಭ್ಯರ್ಥಿ ಪ್ರಕಟಿಸಿದೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನ ಖಾಲಿ ಇದ್ದು, ಬಸವರಾಜ್ ಹೊರಟ್ಟಿ ಅವರು ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ. ಜೂನ್ 13ರಂದು ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಬಿಜೆಪಿ ಟಿಕೆಟ್ ಹೊರಟ್ಟಿ ಪಾಲಾಗಿದೆ.

ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಬಸವರಾಜ್ ಹೊರಟ್ಟಿ, ಸಭಾಪತಿ ಹುದ್ದೆಗೂ ರಾಜೀನಾಮೆ ನೀಡಿದ್ದರು. ಪಕ್ಷ ಸೇರ್ಪಡೆ ಮಾತುಕತೆ ವೇಳೆ ನೀಡಿದ್ದ ಭರವಸೆಯಂತೆ ಬಿಜೆಪಿ ಬಸವರಾಜ್ ಹೊರಟ್ಟಿ ಅವರಿಗೆ ಟಿಕೆಟ್ ನೀಡಿದೆ. ಇನ್ನು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಎಂಎಲ್ಸಿ ಮೋಹನ್ ಲಿಂಬಿಕಾಯಿ ಅವರಿಗೆ ನಿರಾಸೆಯಾಗಿದೆ. 26 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ.

- Advertisement -

Latest News

error: Content is protected !!