Saturday, June 27, 2026
Homeತಾಜಾ ಸುದ್ದಿನಟ ಶಿವರಾಜ್ ಕುಮಾರ್ ವಿರುದ್ಧ ದೂರು ದಾಖಲಿಸಿದ ಬಿಜೆಪಿ..!

ನಟ ಶಿವರಾಜ್ ಕುಮಾರ್ ವಿರುದ್ಧ ದೂರು ದಾಖಲಿಸಿದ ಬಿಜೆಪಿ..!

- Advertisement -
- Advertisement -

ಬೆಂಗಳೂರು: ಶಿವಮೊಗ್ಗ ಲೋಕ ಸಭಾ ಕ್ಷೇತ್ರದಲ್ಲಿ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಪತ್ನಿ ಪರ ಶಿವರಾಜ್ ಕುಮಾರ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಅವರ ಸಿನಿಮಾ, ಜಾಹೀರಾತುಗಳನ್ನು ನಿಷೇಧ ಮಾಡಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿಯ ಒಬಿಸಿ ಮೋರ್ಚಾವು ದೂರು ನೀಡಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದಾರೆ. ಪತ್ನಿಯ ಚುನಾವಣಾ ಪ್ರಚಾರಕ್ಕೆ ನಟ ಶಿವರಾಜ್ ಕುಮಾರ್ ಕೂಡ ಸಾಥ್ ನೀಡಿದ್ದರು. ಭದ್ರಾವತಿಯಿಂದ ಪ್ರಚಾರ ಆರಂಭಿಸಿದ ಗೀತಾ ಶಿವರಾಜ್ ಕುಮಾರ್ ತಮಗೆ ಮತ ಹಾಕುವಂತೆ ಮತಯಾಚನೆ ಮಾಡಿದ್ದರು. ಈ ರ್‍ಯಾಲಿಯಲ್ಲಿ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಮತ್ತಿತರರು ಇದ್ದರು.

- Advertisement -

Latest News

error: Content is protected !!