Thursday, June 4, 2026
Homeಕರಾವಳಿಮಂಗಳೂರು: ರಾಜ್ಯದ ಅಸ್ತವ್ಯಸ್ತ ಸ್ಥಿತಿಗೆ ಕಾಂಗ್ರೆಸ್ ಕಾರಣ, ಕಾವೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಮಂಗಳೂರು: ರಾಜ್ಯದ ಅಸ್ತವ್ಯಸ್ತ ಸ್ಥಿತಿಗೆ ಕಾಂಗ್ರೆಸ್ ಕಾರಣ, ಕಾವೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

- Advertisement -
- Advertisement -

ಮಂಗಳೂರು: ವಿಧಾನಸಭೆ ಕಲಾಪ ನಡೆಸಲು ಕಾಂಗ್ರೆಸ್ ಅಡ್ಡಿಪಡಿಸಿ ರಾಜ್ಯದಲ್ಲಿ ಶಾಂತಿ ಕದಡುತ್ತಿರುವುದನ್ನು ಖಂಡಿಸಿ ಬಿಜೆಪಿ ಉತ್ತರ ಮಂಡಲ ವತಿಯಿಂದ ನಗರದ ಕಾವೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲಾಯಿತು.

ಕಾವೂರು ಬಿಜೆಪಿ ಕಚೇರಿಯಿಂದ ಕಾವೂರು ಜಂಕ್ಷನ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು ಈ ವೇಳೆ ಪ್ರತಿಭಟನಾಕಾರರು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಡಾ.ಭರತ್ ಶೆಟ್ಟಿ, ಕಾಂಗ್ರೆಸ್ ಪಕ್ಷದಿಂದ ವಿಧಾನಮಂಡಲ ಅಧಿವೇಶನಕ್ಕೆ ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿ, ”ರಾಜ್ಯದ ಪ್ರಗತಿಗಾಗಿ ನೂರಾರು ಅಭಿವೃದ್ಧಿ ಪರ ಕಾಯಿದೆಗಳನ್ನು ಜಾರಿಗೊಳಿಸುತ್ತಿರುವ ಆಡಳಿತಾರೂಢ ಬಿಜೆಪಿಯೊಂದಿಗೆ ಕಾಂಗ್ರೆಸ್ ಕೈಜೋಡಿಸಬೇಕಿತ್ತು. ಆದರೆ, ವಿಧಾನಸಭೆ ಕಲಾಪಕ್ಕೆ ಅಡ್ಡಿಪಡಿಸಿ ವಿಧಾನಸಭೆಯೊಳಗೆ ರಾಷ್ಟ್ರಧ್ವಜ ಹಿಡಿಯುವುದರ ಮೂಲಕ ದೇಶವಿರೋಧಿಗಳೆಂದು ತೋರಿಸಿಕೊಳ್ಳುತ್ತಿದ್ದಾರೆ.

ಈ ಹಿಂದೆ ಸಿಎಎ ವಿರುದ್ಧ ಪ್ರತಿಭಟನೆ ನಡೆಸುವ ನೆಪದಲ್ಲಿ ಮಂಗಳೂರಿನ ಬಂದರ್ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಯತ್ನಿಸಲಾಗಿತ್ತು. ಕೆ.ಜಿ.ಹಳ್ಳಿಯಲ್ಲಿ ಕಾಂಗ್ರೆಸ್ ನ ದಲಿತ ಶಾಸಕರ ಮನೆಗೆ ಬೆಂಕಿ ಹಚ್ಚಿ ಕೋಮುಗಲಭೆ ಸೃಷ್ಟಿಸುವ ಯತ್ನ ನಡೆದಿದೆ. ತಮ್ಮ ಪಕ್ಷದ ದಲಿತ ಶಾಸಕನ ನೆರವಿಗೆ ಬಾರದೆ ಕಾಂಗ್ರೆಸ್ ಪಕ್ಷದ ನಾಯಕರೇ ಅಂತರ ಕಾಯ್ದುಕೊಂಡಿದ್ದಾರೆ.

“ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಎಸ್‌ಡಿಪಿಐ ಮತ್ತು ಕಾಂಗ್ರೆಸ್ ಪರಸ್ಪರ ಮೈತ್ರಿಯಿಂದ ಅಧಿಕಾರ ನಡೆಸುತ್ತಿವೆ. ಕಾಂಗ್ರೆಸ್ ಸದಸ್ಯರು ಕೋಮುವಾದಿ ಶಕ್ತಿಗಳಿಂದ ದೂರವಾಗಬೇಕಾದರೆ ಕೂಡಲೇ ರಾಜೀನಾಮೆ ನೀಡಿ ಹೊರಗೆ ಬರಬೇಕು,” ಎಂದರು.

ಉತ್ತರ ಮಂಡಲ ಬಿಜೆಪಿ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಉಪಾಧ್ಯಕ್ಷ ಗಣೇಶ್ ಹೊಸಬೆಟ್ಟು, ಜಿಲ್ಲಾ ಮಾಧ್ಯಮ ಪ್ರಭಾರಿ ರಂದೀಪ್ ಕಾಂಚನ್, ಮುಖ್ಯ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಎಂಸಿಸಿ ಸದಸ್ಯರು, ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರು, ವಿವಿಧ ಮೋರ್ಚಗಳ ಪ್ರಮುಖರು, ಮಂಡಲ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!