Wednesday, April 24, 2024
Homeಕರಾವಳಿಬಿಜೆಪಿಯದ್ದು ಕೇವಲ ರಾಜಕೀಯ ಹಿಂದುತ್ವ; ಮಾಜಿ ಸಚಿವ ಬಿ.ರಮಾನಾಥ ರೈ

ಬಿಜೆಪಿಯದ್ದು ಕೇವಲ ರಾಜಕೀಯ ಹಿಂದುತ್ವ; ಮಾಜಿ ಸಚಿವ ಬಿ.ರಮಾನಾಥ ರೈ

spot_img
- Advertisement -
- Advertisement -

ಬಂಟ್ವಾಳ: ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಪ್ರಾರ್ಥನಾ ಮಂದಿರಗಳನ್ನು ಧ್ವಂಸ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡಿನಲ್ಲಿ ಶನಿವಾರ ಪ್ರತಿಭಟನಾ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಬಿ.ರಮಾನಾಥಯವರು, “ ನಂಜನಗೂಡು ಮಹದೇವಮ್ಮ ದೇವಾಲಯವನ್ನು ಧ್ವಂಸ ಮಾಡಿರುವುದಕ್ಕೆ ನೇರ ಕಾರಣ ಬಿಜೆಪಿ ಪಕ್ಷ ಹಾಗೂ ರಾಜ್ಯ ಬಿಜೆಪಿ ಸರ್ಕಾರ. ಚುನಾವಣೆಗಾಗಿ ಹುಟ್ಟಿದ ಬಿಜೆಪಿ ಪಕ್ಷದ್ದು ನಕಲಿ ಹಿಂದುತ್ವ ಆಗಿದೆ. ಅಲ್ಲದೆ ಸರಕಾರವೇ ಮುಂದೆ ನಿಂತು ದೇವಸ್ಥಾನವನ್ನು ಕೆಡವಿದ ಬಳಿಕ ಜನರ ಆಕ್ರೋಶವನ್ನು ಎದುರಿಸಲು ಆಗದೆ ಅಧಿಕಾರಿಗಳನ್ನು ಹೊಣೆ ಮಾಡುತ್ತಿದ್ದಾರೆ. ಚುನಾವಣೆಗಳು ಹತ್ತಿರ ಬಂದಾಗ ಮಾತ್ರ ಬಿಜೆಪಿಯವರು ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ಹಿಂದೂ ಸಮಾಜ ಹಾಗೂ ದೇವಸ್ಥಾನಗಳನ್ನು ಅಭಿವೃದ್ಧಿ ಮಾಡಿರುವ ಕಾಂಗ್ರೆಸ್ ನದ್ದು ನಿಜವಾದ ಧಾರ್ಮಿಕ ಹಿಂದುತ್ವ ಆಗಿದೆ. ಬಿಜೆಪಿಯದ್ದು ಕೇವಲ ರಾಜಕೀಯ ಹಿಂದುತ್ವ ಆಗಿದೆ” ಎಂದರು.

ಕಾಂಗ್ರೆಸ್ ಪಕ್ಷವು ಕೋಮುವಾದದ ಮೂಲಕ ರಾಜಕೀಯ ಮಾಡುವ ಪಕ್ಷಗಳು, ಸಂಘಟನೆಗಳ ವಿರುದ್ಧ ಧ್ವನಿ ಎತ್ತುತ್ತಿದೆ. ಇನ್ನು ಮುಂದೆ ರಾಜ್ಯದಲ್ಲಿ ಒಂದೇ ಒಂದು ದೇವಸ್ಥಾನವನ್ನು ಒಡೆಯಲು ಕಾಂಗ್ರೆಸ್ ಪಕ್ಷ ಅವಕಾಶ ನೀಡುವುದಿಲ್ಲ. ದೇವಸ್ಥಾನದ ಧ್ವಂಸ ರಾಜ್ಯ ಸರಕಾರದ ಅಘೋಷಿತ ಕಾರ್ಯಕ್ರಮ .ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಸನಾತನ ಹಿಂದೂ ಧರ್ಮದ ಹೆಸರನ್ನು ಕೆಡಿಸುತ್ತಿದೆ ಎಂದು ಹೇಳಿದರು.

ಧ್ವಂಸಗೊಂಡು ಬಿದ್ದಿರುವ ದೇವಸ್ಥಾನದ ಕಲ್ಲುಗಳ ಅಡಿಯಲ್ಲಿ ಬಿಜೆಪಿಯವರ ಬಾಲ ಸಿಕ್ಕಿಕೊಂಡಿದೆ. ಅದನ್ನು ಬಿಡಿಸಿಕೊಳ್ಳಲು ರಾತ್ರಿ ಹಗಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಸಂಸದರು, ಶಾಸಕರು ನಾಟಕ ಮಾಡುವುದರಲ್ಲಿ ಮುಳುಗಿದ್ದಾರೆ. ಬಿಜೆಪಿಯನ್ನು ಅಧಿಕಾರಕ್ಕೆ ತಂದ ಸಂಘ ಪರಿವಾರದ ಸಂಘಟನೆಗಳು ಇಂದು ಬೀದಿಗಿಳಿದು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. 2008ರಲ್ಲಿ ಸುಪ್ರೀಂ ಕೋರ್ಟ್ ಆದೇಶ ಬಂದಿದ್ದರೂ ಕಾಂಗ್ರೆಸ್ ಸರಕಾರ ಜನರ ಧಾರ್ಮಿಕ ಭಾವನೆಗೆ ಗೌರವ ನೀಡಿದೆ. ಆದರೆ ಬಿಜೆಪಿ ನೇರವಾಗಿ ದೇವಸ್ಥಾನವನ್ನು ಧ್ವಂಸ ಮಾಡುವ ಕೆಲಸಕ್ಕೆ ಇಳಿದಿದೆ. ಪ್ರಸಕ್ತ ಕಾಂಗ್ರೆಸ್ ಸರಕಾರ ಇದ್ದಿದ್ದರೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ ಎಂದು ಅವರು ನುಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಿ.ಸಿ.ರೋಡ್, ಬಂಟ್ವಾಳ ತಾಪಂ ಮಾಜಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಪಂ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ.ಎಸ್.ಮುಹಮ್ಮದ್,ಮಾಜಿ ತಾಲೂಕ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ವಿ ಶೆಟ್ಟಿ,ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಅಧ್ಯಕ್ಷರಾದ ಶ್ರೀಮತಿ ವಿಲ್ಮಾ ಮೋರಸ್ ಹಾಗೂ ಶ್ರೀಮತಿ ಜಯಂತಿ ವಿ ಪೂಜಾರಿ,ದ.ಕ. ಜಿಲ್ಲಾ ಕಿಶಾನ್ ಘಟಕದ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ, ಬಂಟ್ವಾಳ ಪುರಸಭಾ ಅಧ್ಯಕ್ಷ ಮುಹಮ್ಮದ್ ಶರೀಫ್,ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ನವಾಝ್ ಬಡಕಬೈಲ್,ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರ,ಇರಾ ಗ್ರಾಪಂ ಮಾಜಿ ಅಧ್ಯಕ್ಷ ರಝಾಕ್ ಕುಕ್ಕಾಜೆ, ಬೂಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ,ಮಾಜಿ ಎಪಿಎಂಸಿ ಅಧ್ಯಕ್ಷರಾದ ಪದ್ಮನಾಭ ರೈ,ಪ್ರಮುಖರಾದ ಮಾಯಿಲಪ್ಪ ಸಾಲಿಯಾನ್, ಸುದರ್ಶನ್ ಜೈನ್, ಪದ್ಮನಾಭ ರೈ, ಮುಹಮ್ಮದ್ ನಂದಾವರ,ವೆಂಕಪ್ಪ ಪೂಜಾರಿ, ಪ್ರವೀಣ್ ರೊಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!