Wednesday, June 24, 2026
Homeಪ್ರಮುಖ-ಸುದ್ದಿನಾನು ಆರೋಗ್ಯವಾಗಿದ್ದೇನೆ, ಜೆಡಿಎಸ್-ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ

ನಾನು ಆರೋಗ್ಯವಾಗಿದ್ದೇನೆ, ಜೆಡಿಎಸ್-ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ

- Advertisement -
- Advertisement -

ಬೆಂಗಳೂರು: ನಾನು ಆರೋಗ್ಯವಾಗಿದ್ದೇನೆ, ಯಾರೂ ಹೆದರಬೇಡಿ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಇಲಾಖೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ

ಬೆಂಗಳೂರಿನ‌ ಜೆಡಿಎಸ್ ಮುಖ್ಯ ಕಚೇರಿಯಲ್ಲಿ ಇಂದು ಪಕ್ಷದಿಂದ ಆಯೋಜಿಸಿರುವ ಜನರೊಂದಿಗೆ ಜನತಾದಳ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಹೆಚ್ ಡಿಕೆ, ಕುಮಾರಸ್ವಾಮಿ ಆರೋಗ್ಯ ಕೆಟ್ಟಿದೆ ಬನ್ನಿ ಅಂತಾ ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಪಕ್ಷ ಕರೆಯುತ್ತಿದೆ ಆದರೆ ಜನರ ಜೊತೆ ನಾನು ಇನ್ನೂ 15-20 ವರ್ಷ ಇರುತ್ತೇನೆ ಎಂದು ಹೇಳಿದ್ದಾರೆ.

ಜೆಡಿಎಸ್ – ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ .ಮೈತ್ರಿಯಲ್ಲಿ ಗೊಂದಲ ಇಲ್ಲ,‌ ಸೀಟು ತರುವುದು ನನ್ನ ಜವಾಬ್ದಾರಿ ಎಂದಿರುವ ಕುಮಾರಸ್ವಾಮಿ, ಕ್ಷೇತ್ರ ಗಟ್ಟಿ ಮಾಡಿಕೊಳ್ಳಿ, ನಾನು ಸೀಟು ತರುತ್ತೇನೆ, ಎಲ್ಲವೂ ಕೇಂದ್ರದಲ್ಲಿ ನಿರ್ಧಾರವಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಜೆಡಿಎಸ್ ಪಕ್ಷ ಬಲವರ್ಧನೆ ಹಿನ್ನೆಲೆಯಲ್ಲಿ ಜನರೊಂದಿಗೆ ಜನತಾದಳ ಅಭಿಯಾನಕ್ಕೆ ಇಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಚಾಲನೆ ನೀಡಿದರು.ಜನರೊಂದಿಗೆ ಜನತಾದಳ ಅಭಿಯಾನದ ಮೂಲಕ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ 58 ದಿನಗಳ ಕಾಲ ರಾಜ್ಯ ಪ್ರವಾಸ ಮಾಡಲಿದ್ದಾರೆ‌.

- Advertisement -

Latest News

error: Content is protected !!