Thursday, October 29, 2026
Homeಚಿಕ್ಕಮಗಳೂರುರಾಜ್ಯಾದ್ಯಂತ ನ.1 ರಿಂದ 30ರವೆರೆಗೆ ಬಿಜೆಪಿಯಿಂದ ಅರಾಜಕತೆ ಹಟಾವೋ ಅಭಿಯಾನ

ರಾಜ್ಯಾದ್ಯಂತ ನ.1 ರಿಂದ 30ರವೆರೆಗೆ ಬಿಜೆಪಿಯಿಂದ ಅರಾಜಕತೆ ಹಟಾವೋ ಅಭಿಯಾನ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಮೂಡಿಸುತ್ತಿದ್ದು, ಸುಳ್ಳು ಸುದ್ದಿಗಳ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಈ ಧೋರಣೆಯನ್ನು ಖಂಡಿಸಿ ನವೆಂಬರ್ 1ರಿಂದ 30ರವರೆಗೆ ರಾಜ್ಯಾದ್ಯಂತ ‘ಅರಾಜಕತೆ ಹಟಾವೋ’ ಅಭಿಯಾನ ನಡೆಸಲು ಬಿಜೆಪಿ ನಿರ್ಧರಿಸಿದೆ ಎಂದು ತಿಳಿಸಿದರು.

ಸ್ವಾತಂತ್ರ್ಯಾನಂತರ ದೇಶದಲ್ಲಿ 12 ಬಾರಿ ಎಸ್‌ಐಆರ್ ಪ್ರಕ್ರಿಯೆ ನಡೆದಿದ್ದು, ಈ ಸಂದರ್ಭದಲ್ಲಿ ಹಲವು ಬಾರಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಮತದಾರರ ಪಟ್ಟಿಯ ಪರಿಷ್ಕರಣೆ ಚುನಾವಣಾ ಆಯೋಗದ ನಿರಂತರ ಸಾಂವಿಧಾನಿಕ ಪ್ರಕ್ರಿಯೆಯಾಗಿದೆ. ಆದರೂ ಕಾಂಗ್ರೆಸ್ ಈ ಪ್ರಕ್ರಿಯೆಯನ್ನು ರಾಜಕೀಯ ವಿವಾದವನ್ನಾಗಿ ಮಾಡುತ್ತಿದೆ ಎಂದು ಅವರು ಟೀಕಿಸಿದರು.

ಎಸ್‌ಐಆರ್ ಆರಂಭಕ್ಕೂ ಮುನ್ನ ಚುನಾವಣಾಧಿಕಾರಿಗಳು ರಾಜ್ಯದಿಂದ ತಾಲೂಕು ಮಟ್ಟದವರೆಗೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ. ಆ ಸಂದರ್ಭದಲ್ಲಿ ಯಾವುದೇ ಆಕ್ಷೇಪ ವ್ಯಕ್ತಪಡಿಸದ ಕಾಂಗ್ರೆಸ್, ಈಗ ಜನರಲ್ಲಿ ಗೊಂದಲ ಮೂಡಿಸುವ ರೀತಿಯಲ್ಲಿ ಹೋರಾಟ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ಸುನಿಲ್ ಕುಮಾರ್ ಹೇಳಿದರು.

- Advertisement -

Latest News

error: Content is protected !!