Friday, June 27, 2025
Homeತಾಜಾ ಸುದ್ದಿಮಂಗಳೂರು; ಉಪ್ಪಳದಲ್ಲಿ ಭೀಕರ ಅಪಘಾತದಲ್ಲಿ ಬಿಜೆಪಿ ಮುಖಂಡ ಸಾವು

ಮಂಗಳೂರು; ಉಪ್ಪಳದಲ್ಲಿ ಭೀಕರ ಅಪಘಾತದಲ್ಲಿ ಬಿಜೆಪಿ ಮುಖಂಡ ಸಾವು

spot_img
- Advertisement -
- Advertisement -

ಮಂಗಳೂರು; ಸ್ಕೂಟರ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವನ್ನಪ್ಪಿದ ಘಟನೆ ಕಾಸರಗೋಡು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಬಳಿ ಸಂಭವಿಸಿದೆ.


ಉಪ್ಪಳ ಪ್ರತಾಪ್ ನಗರದ ಕುಂಬಳೆ ಮಂಡಲ ಕಾರ್ಯದರ್ಶಿ ಧನರಾಜ್ (44) ಮೃತ ದುರ್ದೈವಿ. ಶನಿವಾರ ಮಧ್ಯಾಹ್ನ ಬಂದ್ಯೋಡಿನಲ್ಲಿ ಬಿಜೆಪಿ ಮೀಟಿಂಗ್ ಮುಗಿಸಿ ಮನೆ ಕಡೆಗೆ ಹಿಂತಿರುಗುತ್ತಿದ್ದಾಗ ಇವರ ಬೈಕಿಗೆ ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ.

ಬಂದ್ಯೋಡು ಶಿರಿಯಾದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಏಕಮುಖದ ರಸ್ತೆಯಲ್ಲಿ ಎರಡೂ ಕಡೆಯ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಲಾಗಿತ್ತು. ಇದರಿಂದಾಗಿ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಹೋಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಧನರಾಜ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

- Advertisement -
spot_img

Latest News

error: Content is protected !!