Friday, June 5, 2026
Homeಕರಾವಳಿಮತ್ತೆ ಚುನಾವಣೆಗೆ ಸ್ಫರ್ಧಿಸುವಂತೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರಿಗೆ ಬಿಜೆಪಿ ನಾಯಕರ ಒತ್ತಡ

ಮತ್ತೆ ಚುನಾವಣೆಗೆ ಸ್ಫರ್ಧಿಸುವಂತೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರಿಗೆ ಬಿಜೆಪಿ ನಾಯಕರ ಒತ್ತಡ

- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರಿಗೆ ಮತ್ತೊಮ್ಮೆ ಲೋಕಸಭಾ ಚುನಾವಣೆಗೆ ಸ್ಫರ್ಧಿಸುವಂತೆ ಒತ್ತಡ ವ್ಯಕ್ತವಾಗಿದೆ.

ಬೆಂಗಳೂರಿನ ಸಂಜಯನಗರದಲ್ಲಿರುವ ಸದಾನಂದ ಗೌಡರ ನಿವಾಸಕ್ಕೆ ಇಂದು ದಿಢೀರ್ ಭೇಟಿ ನೀಡಿದ್ದ ಬಿಜೆಪಿ ನಾಯಕರು ಮತ್ತೆ ಸ್ಫರ್ಧೆ ಮಾಡುವಂತೆ ಆಗ್ರಹಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ಶಾಸಕ ಡಾ. ಅಶ್ವಥ್ ನಾರಾಯಣ ಅವರು ಭೇಟಿ ನೀಡಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಫರ್ಧಿಸುವಂತೆ ಒತ್ತಡ ಹೇರಿದ್ದಾರೆ.

ಅರ್ಧ ಗಂಟೆ ಕಾಲ ಸದಾನಂದ ಗೌಡ ಜೊತೆ ಚರ್ಚೆ ನಡೆಸಿ ಮೂವರು ನಾಯಕರು ವಾಪಸಾಗಿದ್ದಾರೆ. ಈ ವೇಳೆ ರಾಜ್ಯ ಬಿಜೆಪಿಯ ಪ್ರಸ್ತುತ ಬೆಳವಣಿಗೆಗಳ ಬಗ್ಗೆಯೂ ಚರ್ಚೆ ನಡೆಸಿದೆ.

ಹಾಲಿ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಡಿ.ವಿ. ಸದಾನಂದ ಗೌಡ ಈಗಾಗಲೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ.

- Advertisement -

Latest News

error: Content is protected !!