Saturday, June 6, 2026
Homeಕರಾವಳಿಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಬೆಳ್ತಂಗಡಿಯ ಯುವ ಮೋರ್ಚಾದ ಇಬ್ಬರು...

ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಬೆಳ್ತಂಗಡಿಯ ಯುವ ಮೋರ್ಚಾದ ಇಬ್ಬರು ಪ್ರಮುಖರು ರಾಜೀನಾಮೆ

- Advertisement -
- Advertisement -

ಬೆಳ್ತಂಗಡಿ : ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಿರುವ ಬಗ್ಗೆ ಪಕ್ಷದ ನಾಯಕರು ಹಾಗೂ ರಾಜ್ಯ ಸರಕಾರ ಬಗ್ಗೆ ಅಸಮಾಧಾನದಿಂದ ಬೆಳ್ತಂಗಡಿ ಇಬ್ಬರು ಯುವ ಮೋರ್ಚಾದ ಪ್ರಮುಖರು ರಾಜೀನಾಮೆ ಸಲ್ಲಿಸಿದ್ದಾರೆ.

ಬಿಜೆಪಿ ಯುವ ಮೊರ್ಚಾ ಕಾರ್ಯಕಾರಿಣಿ ಸದಸ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಕಾರ್ಯವೈಖರಿ ಹಾಗೂ ಪಕ್ಷದ ನಾಯಕರ ಬಗ್ಗೆ ಬೇಸತ್ತು ಬೆಳ್ತಂಗಡಿ ತಾಲೂಕಿನ ಯುವ ಮೊರ್ಚಾದ  ಇಬ್ಬರು ಪ್ರಮುಖರು ರಾಜಿನಾಮೆ ನೀಡಿದ್ದಾರೆ.

ಬೆಳ್ತಂಗಡಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಹಾಗೂ‌ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಮಹಾಶಕ್ತಿ ಕೇಂದ್ರದ ಯುವ ಮೋರ್ಚಾ ಸಂಚಾಲಕ ಗಣೇಶ್ ಕುಂದಾರ್ ರಾಜೀನಾಮೆ ‌ನೀಡಿದ್ದಾರೆ. ರಾಜೀನಾಮೆ ನೀಡಿರುವ ಬಗ್ಗೆ ತಮ್ಮ ಫೇಸ್ ಬುಕ್ ಹಾಗೂ ವಾಟ್ಸಾಪ್ ಸ್ಟೇಟಸ್ ನಲ್ಲಿ ಅಧಿಕೃತ ಮಾಹಿತಿಯನ್ನು ಹಾಕಿದ್ದಾರೆ.

- Advertisement -

Latest News

error: Content is protected !!