Friday, June 5, 2026
Homeಕರಾವಳಿಪ್ರವೀಣ್ ನೆಟ್ಟಾರು ಕೊಲೆ ಖಂಡಿಸಿ ಬಿಜೆಪಿ ಮುಖಂಡರಿಂದ ರಾಜೀನಾಮೆ

ಪ್ರವೀಣ್ ನೆಟ್ಟಾರು ಕೊಲೆ ಖಂಡಿಸಿ ಬಿಜೆಪಿ ಮುಖಂಡರಿಂದ ರಾಜೀನಾಮೆ

- Advertisement -
- Advertisement -

ಚಿಕ್ಕಮಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಬಿಜೆಪಿ ನಾಯಕರಿಂದಲೇ ಆಕ್ರೋಶ  ವ್ಯಕ್ತವಾಗಿದೆ.

ಇದರ ಬೆನ್ನಲ್ಲೇ  ಚಿಕ್ಕಮಗಳೂರಿನಲ್ಲಿ ಹಲವಾರು ಬಿಜೆಪಿ ಪ್ರಮುಖರು ಹತ್ಯೆ ಖಂಡಿಸಿ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚಾದ ಹಲವು ನಾಯಕರು ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ‌.

ಬೇಸರ ವ್ಯಕ್ತಪಡಿಸಿರುವ ಬಿಜೆಪಿ ಮುಖಂಡರು, ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ‌ . ಈಗಾಗಲೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಪ್ರಮುಖರು ರಾಜೀನಾಮೆ ಸಲ್ಲಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸ್ವ ಪಕ್ಷದ ಮೇಲೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಕೊಪ್ಪಳದಲ್ಲೂ ಬಿಜೆಪಿ ಯುವ ಮೋರ್ಚಾ ಸದಸ್ಯರು ರಾಜೀನಾಮೆಗೆ ಮುಂದಾಗಿದ್ದಾರೆ.

- Advertisement -

Latest News

error: Content is protected !!