Wednesday, June 3, 2026
Homeಕರಾವಳಿಉಡುಪಿನಾಳೆ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಹಿನ್ನೆಲೆ: ಕರಾವಳಿಯ ದೇವಸ್ಥಾನಗಳಿಗೆ ಭೇಟಿ ನೀಡಲಿರುವ ಬಿಜೆಪಿ ನಾಯಕರು

ನಾಳೆ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಹಿನ್ನೆಲೆ: ಕರಾವಳಿಯ ದೇವಸ್ಥಾನಗಳಿಗೆ ಭೇಟಿ ನೀಡಲಿರುವ ಬಿಜೆಪಿ ನಾಯಕರು

- Advertisement -
- Advertisement -

ಮಂಗಳೂರು: ನಾಳೆ ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ದೇವಸ್ಥಾನಗಳಲ್ಲಿ ಪ್ರಾಣ ಪ್ರತಿಷ್ಠೆ ಸಂಬಂಧಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಸದ ನಳೀನ್ ಕುಮಾರ್ ಮಂಗಳೂರಿನ ಉರ್ವದಲ್ಲಿರುವ ರಾಮಮಂದಿರಕ್ಕೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲೆಯ ಕೋಟ ತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ರಾಮಮಂದಿರದಲ್ಲಿ ಭಾಗವಹಿಸಲಿದ್ದಾರೆ.

ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಉಡುಪಿ ಶ್ರೀಕೃಷ್ಣ ಮಠದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದ ಗೌಡ ಬೆಂಗಳೂರಿನ ಡಾಲರ್ಸ್ ಕಾಲೋನಿಯ ಆರ್.ಎಂ.ವಿ. ಎರಡನೇ ಹಂತದಲ್ಲಿರುವ ಮಾರುತಿ ಮಂದಿರಕ್ಕೆ ಭೇಟಿ ನೀಡಲಿದ್ದಾರೆ.

- Advertisement -

Latest News

error: Content is protected !!