Tuesday, June 30, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ಸಭೆ

ಬೆಳ್ತಂಗಡಿ: ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ಸಭೆ

- Advertisement -
- Advertisement -

ಬೆಳ್ತಂಗಡಿ: ದಿನಾಂಕ 9.6.2026 ಮಂಗಳವಾರದಂದು ಬೆಳಗ್ಗೆ 10:30 ಕ್ಕೆ ಸರಿಯಾಗಿ ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾದ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ರಾವ್ ರವರು ಭಾಗವಹಿಸಿ, ತೀವ್ರ ಮತಪಟ್ಟಿ ಪರಿಷ್ಕರಣೆಯ ಮುಂದಿನ ಕಾರ್ಯ ಯೋಜನೆ ಬಗ್ಗೆ, ಪ್ರವಾಸ ಪ್ರಮುಖ, ಮನ್ ಕಿ ಬಾತ್ ಪ್ರಮುಖ್ ರನ್ನು ಆಯ್ಕೆ ಮಾಡುವ ಬಗ್ಗೆ, ಮಂಗಳೂರಿನಲ್ಲಿ ನಡೆಯುವ ಅಭಿನಂದನಾ ಸಭೆಯ ಬಗ್ಗೆ, ಮೋದಿಜಿಯ 12 ವರ್ಷದ ಆಡಳಿತದ ಸಂಭ್ರಮಾಚರಣೆಯನ್ನು ಆಚರಿಸುವ  ಬಗ್ಗೆ ,ಹೀಗೆ ಸಂಘಟನಾತ್ಮಕ ಮಾಹಿತಿಯನ್ನು ನೀಡಿದರು.

ತಾಲೂಕು ಮಹಿಳಾ ಮೋರ್ಚದ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು. ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ಶ್ರೀ ಸೀತಾರಾಮ್ ಮನ್ ಕಿ ಬಾತ್ ಬಗ್ಗೆ ಮಾಹಿತಿಯನ್ನು ನೀಡಿದರು. ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಮತ್ತು ಇನ್ನೋರ್ವ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಜಯಂತ್ ಧನ್ಯವಾದವಿತ್ತರು. ಈ ಸಭೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಲಖೀತ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರು ಮಂಡಲ ಪ್ರಭರಿಗಳು ಶ್ರೀಮತಿ ಕಮಲಾಕ್ಷಿ, ಜಿಲ್ಲಾ ಭಾಜಪ ಕಾರ್ಯದರ್ಶಿ ಶ್ರೀಮತಿ ವಸಂತಿ ಲಕ್ಷ್ಮಣ್ ,ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ರೀಮತಿ ಅಮಿತಾ ಕುಶಾಲಪ್ಪ ಗೌಡ , ಜಿಲ್ಲಾ  ಎಸ್ ಸಿ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಚಂದ್ರಕಲಾ ಸಿ ಕೆ,ಮಂಡಲ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ನಾಯಕ್ ಮತ್ತು ಮಹಿಳಾ ಮೋರ್ಚದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!