Tuesday, May 7, 2024
Homeತಾಜಾ ಸುದ್ದಿಬಿಜೆಪಿ ಪ್ರಣಾಳಿಕೆ ಬಿಡುಗಡೆ; ಪ್ರಣಾಳಿಕೆಯಲ್ಲಿ ಏನೇನಿದೆ?

ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಪ್ರಣಾಳಿಕೆಯಲ್ಲಿ ಏನೇನಿದೆ?

spot_img
- Advertisement -
- Advertisement -

ಬೆಂಗಳೂರು; ಹಲವಾರು ಭರವಸೆಗಳೊಂದಿಗೆ ಬಿಜೆಪಿ ಇಂದು ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ನಗರದ ಖಾಸಗಿ ಹೋಟೆಲ್‍ನಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಇಂದು ಭರ್ಜರಿ ಕೊಡುಗೆಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಮಹಾನಗರ ಪಾಲಿಕೆಯ ವಾರ್ಡ್‍ಗಳಲ್ಲಿ ಕೈಗೆಟುಕುವ ದರದಲ್ಲಿ ಗುಣಮಟ್ಟ ಮತ್ತು ಆರೋಗ್ಯಕರ ಆಹಾರಗಳನ್ನು ಒದಗಿಸಲು ಅಟಲ್ ಆಹಾರ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಪ್ರಣಾಳಿಕೆ ಬಿಡುಗಡೆ ನಂತರ ಜೆ.ಪಿ.ನಡ್ಡಾ ಮಾಹಿತಿ ನೀಡಿದರು.

ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ಪ್ರಸ್ತಾಪ ಮಾಡಲಾಗಿದ್ದು, ಬಹುಮುಖ್ಯವಾಗಿ ಮನೆ ಇಲ್ಲದವರಿಗೆ ಸೂರು ಕಲ್ಪಿಸುವ ಹೊಸ ಯೋಜನೆಯನ್ನು ತರುವುದಾಗಿ ತಿಳಿಸಿದ್ದಾರೆ.

ಸರ್ವರಿಗೂ ಸೂರು ಅನ್ವಯ 10 ಲಕ್ಷ ನಿವೇಶನಗಳು ಹಾಗೂ ಬಹುಮಹಡಿ ವಸತಿ ಯೋಜನೆಯಡಿ 5 ಲಕ್ಷ ಮನೆ ನಿರ್ಮಿಸಿ ವಿತರಿಸುವುದು ಸೇರಿದಂತೆ ಒನಕೆ ಓಬವ್ವ ಸಾಮಾಜಿಕ ನ್ಯಾಯನಿ ಸ್ಥಾಪಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರಿಗೆ 10 ಸಾವಿರ ರೂ. ಠೇವಣಿ, ಹೊಸ ಕೃಷಿ ಆಧಾರಿತ ಕೈಗಾರಿಕೆ ಕ್ಲಸ್ಟರ್‍ಗಳು ಮತ್ತು ಆಹಾರ ಕ್ಲಸ್ಟರ್‍ಗಳ ಸ್ಥಾಪನೆ, ವಿಶ್ವೇಶ್ವರಯ್ಯ ವಿದ್ಯಾ ಯೋಜನೆಯಡಿ ಸರ್ಕಾರಿ ಶಾಲೆಗಳ ಉನ್ನತೀಕರಣ, ಐಎಎಸ್, ಕೆಎಎಸ್ ಸೇರಿ ವಿವಿಧ ಉದ್ಯೋಗಕಾಂಕ್ಷಿಗಳ ತರಬೇತಿ ಪಡೆಯಲು ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.

ಕನ್ನಡ ಚಿತ್ರೋದ್ಯಮಕ್ಕೆ ಉದ್ಯಮ ಸ್ಥಾನಮಾನ ನೀಡಿ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ದೇಶದ ಅತಿದೊಡ್ಡ ಪುನೀತ್ ರಾಜ್‍ಕುಮಾರ್ ಫಿಲಂ ಸಿಟಿ ಸ್ಥಾಪನೆ, ವಿಧವೆಯರ ಮಾಸಿಕ ಪಿಂಚಣಿ 800 ರೂ.ನಿಂದ 2 ಸಾವಿರಕ್ಕೆ ಹೆಚ್ಚಳ, ಬೆಂಗಳೂರಿನ ಅಪಾರ್ಟ್‍ಮೆಂಟ್‍ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್‍ಮೆಂಟ್ ಮಾಲೀಕತ್ವ ಕಾಯ್ದೆಗೆ ತಿದ್ದುಪಡಿ ತಂದು ಸಮಸ್ಯೆ ಪರಿಹಾರಕ್ಕೆ ಕ್ರಮ, ಆನ್‍ಲೈನ್ ವ್ಯವಸ್ಥೆ ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಮನ್ವಯ ಯೋಜನೆಯಡಿ ತ್ವರಿಗತಿಯಲ್ಲಿ ಎಸ್‍ಎಂಇ ಮತ್ತು ಐಟಿಐಗಳ ನಡುವೆ ಸಮನ್ವಯ ಸಾಸಿ ಪ್ರತಿಭಾನ್ವಿತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ತೊಡಗಲು ಸಹಾಯ, ಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ದಿಪಡಿಸಲು ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಿ ಈ ಮೂಲಕ ಬೆಂಗಳೂರನ್ನು ಡಿಜಿಟಲ್ ಇನೋವೇಷನ್ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ನಿರ್ಮಾಣ ಮಾಡಲಾಗುವುದು.

ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ಕರ್ನಾಟಕ ರೂಪುಗೊಳ್ಳಲು ಹಾಲಿ ಇರುವ ಬಿಎಂಟಿಸಿ ಬಸ್‍ಗಳನ್ನು ಎಲೆಕ್ಟ್ರಿಕ್ ಬಸ್‍ಗಳಾಗಿ ಪರಿವರ್ತಿಸುವುದು, ಬೆಂಗಳೂರು ಹೊರವಲಯದಲ್ಲಿ ಇವಿ ಸಿಟಿ ಅಭಿವೃದ್ಧಿಪಡಿಸಿ ಚಾರ್ಜಿಂಗ್ ಸ್ಟೇಷನ್‍ಗಳ ನಿರ್ಮಾಣ, ಎಲ್ಲಾ ಗ್ರಾಮಪಂಚಾಯ್ತಿಗಳಲ್ಲಿ ಕಿರುಶಿಥೀಲಿಕರಣ ಸೌಲಭ್ಯ ಕೇಂದ್ರ ಹಾಗೂ ಕೃಷಿ ಸಂಸ್ಕರಣಾ ಘಟಕವನ್ನು ಸ್ಥಾಪಿಸಲು 30 ಸಾವಿರ ಕೋಟಿ ಮೊತ್ತದ ಕೆ-ಅಗ್ರಿಫಂಡ್ ಸ್ಥಾಪಿಸಲಾಗುವುದು ಎಂದು ವಿವರಿಸಿದರು.

ಅತ್ಯಾಧುನಿಕ ಮೂಲ ಸೌಲಭ್ಯಗಳನ್ನು ಒದಗಿಸಿ ರಾಜ್ಯಾದ್ಯಂತ ಪ್ರವಾಸಿ ತಾಣಗಳನ್ನು ರೂಪಿಸಿ ಕಲ್ಯಾಣ ಸಕ್ರ್ಯೂಟ್, ಬನವಾಸಿ ಸಕ್ರ್ಯೂಟ್, ಪರಶುರಾಮ ಸಕ್ರ್ಯೂಟ್ ಮತ್ತು ಕಾವೇರಿ ಸಕ್ರ್ಯೂಟ್, ಗಾಣಗಾಪುರ ಕಾರಿಡಾರ್‍ನ್ನು ಅಭಿವೃದ್ಧಿಪಡಿಸಲು 1500 ವಿನಿಯೋಗಿಸಲಾಗುವುದು ಎಂದು ಮಾಹಿತಿ ನೀಡಿದರು.

ಉತ್ಪಾದನಾ ವಲಯದಲ್ಲಿ 10 ಲಕ್ಷ ಉದ್ಯೋಗಿಗಳನ್ನು ಸೃಷ್ಟಿಸಲು ಬೆಂಗಳೂರಿನ ಹೊರಗೆ ಲಾಜಿಸ್ಟಿಕ್ ಕೈಗಾರಿಕಾ ಕ್ಲಸ್ಟರ್‍ಗಳು, ಸಂಪರ್ಕ ಮತ್ತು ರಫ್ತು ಸೌಲಭ್ಯಗಳನ್ನು ಒಳಗೊಂಡ ಸಮಗ್ರ ಯೋಜನೆಯನ್ನು ಜಾರಿಗೆ ತರಲು ಉತ್ಪಾದನಾ ಆಧಾರಿತ ಪ್ರೋತ್ಸಾಹ ಯೋಜನೆಯನ್ನು ವಿತರಿಸುವುದು ಸೇರಿದಂತೆ ಕೃಷಿ, ಮೂಲಸೌಕರ್ಯ, ಕೈಗಾರಿಕೆ, ಆರೋಗ್ಯ ಕ್ಷೇತ್ರದತ್ತ ಹೆಚ್ಚಿನ ಒತ್ತು ನೀಡಲಾಗಿದೆ.

ಪ್ರಣಾಳಿಕೆ ಅಧ್ಯಕ್ಷರಾದ ಸುಧಾಕರ್, ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷೆ ಹಾಗೂ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಷಿ, ಕೆ.ನಾರಾಯಣಸ್ವಾಂಇ, ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಡಿ.ವಿ.ಸದಾನಂದಗೌಡ, ಸಚಿವ ಆರ್.ಅಶೋಕ್, ಶಾಸಕ ಅರವಿಂದ ಲಿಂಬಾವಳಿ, ಛಲವಾದಿ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!