Friday, June 5, 2026
Homeಕರಾವಳಿಬಿಜೆಪಿ ಬೆಳ್ತಂಗಡಿ ಮಂಡಲದ‌ ವತಿಯಿಂದ ಉಜಿರೆ ಮಹಾಶಕ್ತಿ ಕೇಂದ್ರದ ಸಭೆ

ಬಿಜೆಪಿ ಬೆಳ್ತಂಗಡಿ ಮಂಡಲದ‌ ವತಿಯಿಂದ ಉಜಿರೆ ಮಹಾಶಕ್ತಿ ಕೇಂದ್ರದ ಸಭೆ

- Advertisement -
- Advertisement -

ಬೆಳ್ತಂಗಡಿ; ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಜಿಲ್ಲಾ ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ,  ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ ಪುದುವೆಟ್ಟು, ಕಾರ್ಯದರ್ಶಿ ನಿರಂಜನ್ ಇದ್ದರು.

- Advertisement -

Latest News

error: Content is protected !!