Saturday, June 6, 2026
Homeತಾಜಾ ಸುದ್ದಿಬಿಜೆಪಿ ಶಾಸಕ ಸಿಎಂ ಉದಾಸಿ ಇನ್ನಿಲ್ಲ

ಬಿಜೆಪಿ ಶಾಸಕ ಸಿಎಂ ಉದಾಸಿ ಇನ್ನಿಲ್ಲ

- Advertisement -
- Advertisement -

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ, ಹಾನಗಲ್ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಸಿ.ಎಂ. ಉದಾಸಿ (77) ಅವರು ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಉದಾಸಿ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ನಿಧನರಾಗಿರುವುದಾಗಿ ತಿಳಿದುಬಂದಿದೆ.

1983 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಪಡೆದಿದ್ದರು. ಈ ಹಿಂದೆ ಯಡಿಯೂರಪ್ಪ ರವರ ಸರ್ಕಾರದಲ್ಲಿ ಸಚಿವರಾಗಿದ್ದರು. ಆರು ಬಾರಿ ಹಾನಗಲ್ ಕ್ಷೇತ್ರದಲ್ಲಿ ಗೆಲುವು ಪಡೆದಿದ್ದರು.

- Advertisement -

Latest News

error: Content is protected !!