Tuesday, June 23, 2026
Homeಕರಾವಳಿಬೆಳ್ತಂಗಡಿ : ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ, ತುಳು ಭಾಷೆಯಲ್ಲಿ ಬಿಜೆಪಿ ಶಾಸಕ ಹರೀಶ್...

ಬೆಳ್ತಂಗಡಿ : ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ, ತುಳು ಭಾಷೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಭಾಷಣ, ವಿಡಿಯೋ ವೈರಲ್

- Advertisement -
- Advertisement -

ಬೆಳ್ತಂಗಡಿ : ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ ಎಂದು ತುಳು ಭಾಷೆಯಲ್ಲಿ ಮಾಡಿರುವ ಭಾಷಣದ ವಿಡಿಯೋ ತುಣುಕು ವೈರಲ್ ಆಗಿದೆ.

ದಕ್ಷಿಣ ಕನ್ನಡ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಕಾಂಗ್ರೆಸ್ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತನ ಹತ್ಯೆ ಆಗಿದೆ. ಕೆಂಪುಕೋಟೆ ಮೇಲೆ ಭಗವಾದ್ವಜ ಹಾರಿಸ್ತೇವೆ ಎಂದು ಹರೀಶ್ ಪೂಂಜಾ ಹೇಳಿದ್ದಾರೆ.

ಕೆ.ಎಸ್. ಈಶ್ವರಪ್ಪ ಈ ಹೇಳಿಕೆ ನೀಡಿದ್ರು ಅಂತ ಅಧಿವೇಶನ ಮೊಟಕುಗೊಳಿಸಿದ್ರು. ಆದರೆ, ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸೋದು ಸಿದ್ದ. ರಾಷ್ಟ್ರಧ್ವಜದ ಕೆಳಗೆ ಭಗವಾಧ್ವಜವನ್ನ ಹಾರಿಸುತ್ತೇವೆ. ಭಗವಾಧ್ವಜ ಹಾರಿಸೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿರುವುದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.

ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಸೋಮವಾರ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಈ ರೀತಿಯಾದ ಹೇಳಿಕೆ ನೀಡಲಾಗಿದೆ.

ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಮಾಡಿದ ಭಾಷಣದ ತುಣುಕು ವೈರಲ್ ಆಗಿದೆ. ಕಾಂಗ್ರೆಸ್ ಷಡ್ಯಂತ್ರ, ಪ್ರೇರಣೆ ಮತ್ತು ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತನ ಹತ್ಯೆ ಆಗಿದೆ. ಕೆಂಪುಕೋಟೆಯ ಮೇಲೆ, ರಾಷ್ಟ್ರಧ್ವಜದ ಕೆಳಗೆ ಭಗವಾಧ್ಬಜ ಹಾರಿಸೋದನ್ನು ಯಾವ ಪಕ್ಷದಿಂದಲೂ ತಪ್ಪಿಸೋದಕ್ಕೆ ಸಾಧ್ಯವೇ ಇಲ್ಲ. ಇದು ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಮಾಜದ ಸಂಕಲ್ಪ. ದೇಶಕ್ಕೆ ಸ್ವಾತಂತ್ರ್ಯ ಸಿಗಲು ಬಾಲಗಂಗಾಧರ ತಿಲಕರು ಭಗವಾಧ್ಬಜ ಎದುರಿಟ್ಟು ಹೋರಾಟ ಮಾಡಿದ್ರು. ಅದಕ್ಕೂ ಮೊದಲು ಹಿಂದೂ ಸಮಾಜದ ಶಕ್ತಿಯಾಗಿದ್ದ ಶಿವಾಜಿ ಮಹಾರಾಜರ ಶಕ್ತಿಯೂ ಭಗವಾಧ್ವಜ ಆಗಿತ್ತು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!