Friday, May 17, 2024
Homeತಾಜಾ ಸುದ್ದಿರಾಜ್ಯದ ಮತ್ತೊಬ್ಬ ಬಿಜೆಪಿ ಶಾಸಕರಿಗೆ ಕೊರೋನಾ ಸೋಂಕು ದೃಢ

ರಾಜ್ಯದ ಮತ್ತೊಬ್ಬ ಬಿಜೆಪಿ ಶಾಸಕರಿಗೆ ಕೊರೋನಾ ಸೋಂಕು ದೃಢ

spot_img
- Advertisement -
- Advertisement -

ಕೊಪ್ಪಳ: ಜಿಲ್ಲೆಯ ಗಂಗಾವತಿಯ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಬಗ್ಗೆ ಶಾಸಕರೇ ಸ್ಪಷ್ಟನೆ ನೀಡಿದ್ದು, ಹಲವು ದಿನಗಳಿಂದ ಕೊರೋನಾ ಸೋಂಕಿನ ಬಗ್ಗೆ ಪಾಲಿಸಬೇಕಾದಂತ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಅನುಸರಿಸಲಾಗಿತ್ತು. ಇದರ ಮಧ್ಯೆ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರ ವರದಿ ಬಂದಿದ್ದು, ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರುವುದಾಗಿ ಸ್ಪಷ್ಟ ಪಡಿಸಿದ್ದಾರೆ.

ಇನ್ನೂ ಕೊರೋನಾ ಸೋಂಕಿಗೆ ತುತ್ತಾಗಿರುವಂತ ನಾನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಬೇಗ ಗುಣಮುಖರಾಗಿ ಕ್ಷೇತ್ರಕ್ಕೆ ಮರಳುತ್ತೇನೆ. ಕ್ಷೇತ್ರದ ಜನರು ಯಾವುದೇ ಆತಂಕ ಪಡಬೇಕಾಗಿಲ್ಲ. ನನ್ನ ಸಂಪರ್ಕದಲ್ಲಿದ್ದ ಜನರು ಸೋಂಕು ಪತ್ತೆ ಪರೀಕ್ಷೆಗೆ ಒಳಪಟ್ಟು, ರೋಗದ ಲಕ್ಷಣಗಳಿದ್ದರೇ ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದ್ದಾರೆ.

ಮೂಲದ ಪ್ರಕಾರ ಶಾಸಕರ ವಾಹನ ಚಾಲಕನ ಪತ್ನಿಗೆ ಸೋಂಕು ತಗುಲಿದ್ದು, ಪ್ರಾಥಮಿಕ ಸಂಪರ್ಕ ಹೊಂದಿದ್ದ ಚಾಲಕನ ಮೂಲಕ ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!