Thursday, June 4, 2026
Homeಕರಾವಳಿರಾಜ್ಯದಲ್ಲಿ ಮತ್ತೊಬ್ಬ ಬಿಜೆಪಿ ಶಾಸಕರಿಗೆ ಕೊರೋನಾ ಪಾಸಿಟಿವ್

ರಾಜ್ಯದಲ್ಲಿ ಮತ್ತೊಬ್ಬ ಬಿಜೆಪಿ ಶಾಸಕರಿಗೆ ಕೊರೋನಾ ಪಾಸಿಟಿವ್

- Advertisement -
- Advertisement -

ಕಲಬುರಗಿ: ಜಿಲ್ಲೆಯ ಸೇಡಂ ಕ್ಷೆತ್ರದ ಬಿಜೆಪಿ ಶಾಸಕ ರಾಜಕುಮಾರ ‌ಪಾಟೀಲ ತೇಲ್ಕೂರರಿಗೆ ಡೆಡ್ಲಿ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ಶಾಸಕರ ಆಪ್ತ ಮೂಲಗಳು ಹೇಳಿವೆ.

ಶಾಸಕರ ಆಪ್ತ ಸಹಾಯಕರಿಗೆ ಎರಡು ದಿನಗಳ ಹಿಂದೆ ಪಾಸಿಟಿವ್ ಬಂದಿದ್ದರಿಂದ ಶಾಸಕರೂ ಪರೀಕ್ಷೆಗೆ ಒಳಗಾಗಿದ್ದರು. ಇಂದು ಶಾಸಕರಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ.

ಸದ್ಯ ಶಾಸಕರು ಬೆಂಗಳೂರಿನಲ್ಲಿ ಉಳಿದಿದ್ದು, ಅಲ್ಲಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್ ಗೆ ದಾಖಲಾಗಿದ್ದಾರೆ ಎಂದು ಆಪ್ತ ಮೂಲಗಳು ಖಚಿತ ಪಡಿಸಿವೆ.

- Advertisement -

Latest News

error: Content is protected !!