Thursday, June 4, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲಾಡಳಿತದ ವಿರುದ್ಧ ಜಿಲ್ಲೆಯ ಬಿಜೆಪಿ ಶಾಸಕರಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾಡಳಿತದ ವಿರುದ್ಧ ಜಿಲ್ಲೆಯ ಬಿಜೆಪಿ ಶಾಸಕರಿಂದ ಪ್ರತಿಭಟನೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವಿರುದ್ಧ ಜಿಲ್ಲೆಯ ಬಿಜೆಪಿ ಶಾಸಕರು  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಿದ್ರು

ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿಯಾಗುತ್ತಿದೆ ಹಾಗೂ ಅಧಿಕಾರಿಗಳ ಅಮಾನತು ಖಂಡಿಸಿ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ  ಪ್ರತಿಭಟನೆ ನಡೆಸಿದ್ರು.

ಶಾಸಕರ ಹಕ್ಕುಚ್ಯುತಿ ಆಗಿದೆ, ಮೂಡಬಿದಿರೆ ಕ್ಷೇತ್ರದ ಇರುವೈಲು ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ಕ್ಷೇತ್ರದ ಇರ್ವತ್ತೂರು ಗ್ರಾಮ ಪಂಚಾಯತ್ ನ ಉದ್ಘಾಟನಾ ಕಾರ್ಯಕ್ರಮವನ್ನು ಶಿಷ್ಟಾಚಾರ ನೆಪದಲ್ಲಿ ರದ್ದುಪಡಿಸಿ, ಅಧಿಕಾರಿಗಳ ಅಮಾನತುಗೊಳಿಸಿರುವುದನ್ನು ಖಂಡಿಸಿ, ಹಾಗೂ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿ ಡಿಸಿ ಕಚೇರಿಯ ಬಾಗಿಲಲ್ಲಿ ಶಾಸಕರು ಧರಣಿ ನಡೆಸಿದ್ರು.

ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಎಂಎಲ್ ಸಿ ಪ್ರತಾಪ ಸಿಂಹ ನಾಯಕ್ ಭಾಗಿಯಾಗಿದ್ದರು.

- Advertisement -

Latest News

error: Content is protected !!