Thursday, June 4, 2026
Homeಕರಾವಳಿಮಂಡ್ಯದಲ್ಲಿ ಭಗವಾಧ್ವಜ ತೆರವು ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಶಾಸಕರ ಪ್ರತಿಭಟನೆ

ಮಂಡ್ಯದಲ್ಲಿ ಭಗವಾಧ್ವಜ ತೆರವು ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಶಾಸಕರ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಭಗವಾಧ್ವಜ ತೆರವು ಪ್ರಕರಣ ಖಂಡಿಸಿ ಮಂಗಳೂರಿನಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.

ಬಿಜೆಪಿ ಶಾಸಕರಾದ ಉಮಾನಾಥ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜ, ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಅಲ್ಲದೇ ಬಿಜೆಪಿ ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಆಶಾ ತಿಮ್ಮಪ್ಪ, ಸುದರ್ಶನ ಮೂಡಬಿದಿರೆ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು‌.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಮರು ಸ್ಥಾಪಿಸಲು ಆಗ್ರಹಿಸಿದರು.‌

ಭಗವಾಧ್ವಜ ತೆರವುಗೊಳಿಸಿದ್ದನ್ನು ಖಂಡಿಸಿ ಬಿಜೆಪಿ ಬಿಜೆಪಿ ಇಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿತ್ತು.

- Advertisement -

Latest News

error: Content is protected !!