Thursday, June 4, 2026
Homeತಾಜಾ ಸುದ್ದಿಕಾಂಗ್ರೆಸ್ ಪೇಸಿಎಂ ಅಭಿಯಾನದ ವಿರುದ್ಧ ಬಿಜೆಪಿ ಎಂಎಲ್ಸಿಗಳಿಂದ ಪ್ರತಿಭಟನೆ

ಕಾಂಗ್ರೆಸ್ ಪೇಸಿಎಂ ಅಭಿಯಾನದ ವಿರುದ್ಧ ಬಿಜೆಪಿ ಎಂಎಲ್ಸಿಗಳಿಂದ ಪ್ರತಿಭಟನೆ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ಪೇಸಿಎಂ ಪೋಸ್ಟರ್ ಅಂಟಿಸುವ ಅಭಿಯಾನದ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಎದುರು ಬಿಜೆಪಿ ವಿಧಾನ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು.

ಸ್ಕ್ಯಾಮ್ ರಾಮಯ್ಯ ಎಂಬ ಪೋಸ್ಟರ್ ಹಿಡಿದು ಕಾಂಗ್ರೆಸ್ ಪಕ್ಷ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಘೋಷಣೆ ಕೂಗಲಾಗಿದೆ.

ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಸೇರಿದಂತೆ ಬಿಜೆಪಿ ಎಂಎಲ್ಸಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

- Advertisement -

Latest News

error: Content is protected !!