Saturday, May 18, 2024
Homeತಾಜಾ ಸುದ್ದಿಅಡಿಕೆ ಸೇವನೆಯನ್ನು ನಿಷೇಧಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಬಿಜೆಪಿ ಸಂಸದ!

ಅಡಿಕೆ ಸೇವನೆಯನ್ನು ನಿಷೇಧಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಬಿಜೆಪಿ ಸಂಸದ!

spot_img
- Advertisement -
- Advertisement -

ನವದೆಹಲಿ: ಕ್ಯಾನ್ಸರ್ ನಂತಹ ರೋಗಗಳು ಅಡಿಕೆ ಸೇವನೆಯಿಂದ ಹೆಚ್ಚಾಗುತ್ತಿದ್ದು, ಜನರಿಗೆ ಅಡಿಕೆ ಸೇವಿಸದಂತೆ ನಿಷೇಧಿಸಬೇಕು ಹಾಗೂ ಧಾರ್ಮಿಕ ವಿಧಿ ವಿಧಾನಗಳಲ್ಲಿ ಅದನ್ನು ಬಳಸಲು ಸರಕಾರ ಅನುಮತಿ ಮುಂದುವರೆಸಬೇಕು ಎಂದು ಒತ್ತಾಯಿಸಿ ಜಾರ್ಖಂಡ್‌ನ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಪಾನ್ ಮಸಾಲದ ಪ್ರಮುಖ ಭಾಗವಾದ ಅಡಕೆ ಸೇವಿಸುವ ಮೂಲಕ ಕ್ಯಾನ್ಸರ್‌ನಂಥ ಮಾರಕ ಕಾಯಿಲೆಗಳಿಗೆ ಜನರು ತುತ್ತಾಗುವುದನ್ನು ನಾನು ನೋಡಿದ್ದೇನೆ. ಹೀಗಾಗಿ ಮನುಷ್ಯರು ಅಡಿಕೆ ಬಳಸದಂತೆ ನಿಷೇಧ ಹೇರಬೇಕೆಂದು ನಾನು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ಅಡಿಕೆ ಹೃದಯದ ರಕ್ತನಾಳ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೆ, ಅಡಕೆ ಸೇವನೆಯಿಂದ ಆಸ್ತಮಾ ರೋಗ ಉಲ್ಬಣವಾಗುತ್ತದೆ. ಅಲ್ಲದೆ, ಉಸಿರಾಟ ಸಮಸ್ಯೆ, ಉಸಿರಾಟದ ಏರಿಳಿತದಂಥ ಸಮಸ್ಯೆಗಳು ಉಂಟಾಗುತ್ತವೆ ಎಂದು ಕೂಡ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೇ ಕಾರಣಗಳಿಗಾಗಿಯೇ 2018ರಲ್ಲಿ ಮಹಾರಾಷ್ಟ್ರ ಸರ್ಕಾರ ಅಡಕೆ ಮಾರಾಟ ಮತ್ತು ಬಳಕೆಯ ನಿಷೇಧಿಸಿತ್ತು. ಹೀಗಾಗಿ ಮನುಷ್ಯರು ಅಡಿಕೆ ಸೇವಿಸದಂತೆ ನಿಷೇಧಿಸಬೇಕು.

- Advertisement -
spot_img

Latest News

error: Content is protected !!