Tuesday, July 8, 2025
Homeಕರಾವಳಿಮಂಗಳೂರುಪುತ್ತೂರು: ಸಹಪಾಠಿಯಿಂದ ಯುವತಿ ತಾಯಿಯಾದ ಪ್ರಕರಣ; ಆರೋಪಿಯ ತಂದೆ ಪಿ.ಜಿ.ಜಗನ್ನಿವಾಸ್ ರಾವ್ ಗೆ ಬಿಜೆಪಿಯಿಂದ ನೋಟಿಸ್

ಪುತ್ತೂರು: ಸಹಪಾಠಿಯಿಂದ ಯುವತಿ ತಾಯಿಯಾದ ಪ್ರಕರಣ; ಆರೋಪಿಯ ತಂದೆ ಪಿ.ಜಿ.ಜಗನ್ನಿವಾಸ್ ರಾವ್ ಗೆ ಬಿಜೆಪಿಯಿಂದ ನೋಟಿಸ್

spot_img
- Advertisement -
- Advertisement -

ಪುತ್ತೂರು: ಸಹಪಾಠಿಯಿಂದ ಯುವತಿ ತಾಯಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯ ತಂದೆ ಪಿ.ಜಿ.ಜಗನ್ನಿವಾಸ್ ರಾವ್ ಗೆ ಬಿಜೆಪಿಯಿಂದ ಶಿಸ್ತು ಕ್ರಮದ ಎಚ್ಚರಿಕೆಯ ನೋಟಿಸ್ ಜಾರಿಯಾಗಿದೆ.

ಪ್ರಕರಣದಿಂದ ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟಾಗಿದೆ. ನಿಮ್ಮ ಮಗ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿ ವಂಚನೆ ಮಾಡಿರುವ ಬಗ್ಗೆ ಸಾರ್ವಜನಿಕವಾಗಿ ಚರ್ಚೆಯಾಗುತ್ತಿದೆ. ಸಂತ್ರಸ್ತೆಯ ಪೋಷಕರು ನೀವು ನ್ಯಾಯಸಮ್ಮತವಾಗಿ ನಡೆದುಕೊಂಡಿಲ್ಲ ಎಂದು ಆರೋಪಿಸಿದ್ದಾರೆ.

ತಾವು ಪಕ್ಷದಲ್ಲಿದ್ದು ನ್ಯಾಯಯುತವಾಗಿ, ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿತ್ತು ಸಂತ್ರಸ್ತೆ‌ ಯುವತಿಗೆ ನ್ಯಾಯ ಒದಗಿಸಿಕೊಡಬೇಕು, ಇಲ್ಲದಿದ್ದಲ್ಲಿ ಪಕ್ಷದ ಹಿತದೃಷ್ಟಿಯಿಂದ ನಿಮ್ಮ ಮೇಲೆ ಕ್ರಮ‌ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ತಕ್ಷಣವೇ ಉತ್ತರಿಸಬೇಕು ಎನ್ನುವ ಎಚ್ಚರಿಕೆಯ ನೋಟೀಸ್ ನೀಡಲಾಗಿದೆ.

- Advertisement -
spot_img

Latest News

error: Content is protected !!