- Advertisement -
- Advertisement -
ಮಂಗಳೂರು: ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಅನುದಾನ ಬಿಡುಗಡೆಗೊಳಿಸದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಛಾ ವತಿಯಿಂದ ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮತ್ತು ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಕೂಡಲೇ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಕೂಡಲೇ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದರು.
ಅನುದಾನ ಬಿಡುಗಡೆ ಸಂಬಂಧಿಸಿದಂತೆ ಆಗ್ರಹಿಸಲು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಛಾ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು.
- Advertisement -