Friday, June 5, 2026
Homeಕರಾವಳಿಹರೀಶ್ ಪೂಂಜ ಬಂಧಿಸಿದರೆ ನಾಳೆ ದ.ಕ. ಜಿಲ್ಲಾ ಬಂದ್ ಗೆ ಕರೆ ಕೊಡಲು ಮುಂದಾದ ಬಿಜೆಪಿ

ಹರೀಶ್ ಪೂಂಜ ಬಂಧಿಸಿದರೆ ನಾಳೆ ದ.ಕ. ಜಿಲ್ಲಾ ಬಂದ್ ಗೆ ಕರೆ ಕೊಡಲು ಮುಂದಾದ ಬಿಜೆಪಿ

- Advertisement -
- Advertisement -

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಿದರೆ ನಾಳೆ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ಕೊಡಲು ಬಿಜೆಪಿ ಮುಂದಾಗಿದೆ.

ಈ ಸಂಬಂಧ ಇಂದು ಬೆಳ್ತಂಗಡಿಯ ಗರ್ಡಾಡಿಯಲ್ಲಿರುವ ಶಾಸಕರ ಖಾಸಗಿ ನಿವಾಸದಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ.‌

ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಶಾಸಕರನ್ನು ಬಂಧಿಸಿದರೆ ಜಿಲ್ಲಾ ಬಂದ್ ಗೆ ಕರೆ ಕೊಡುವುದಾಗಿ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

ಇಂದು ಹರೀಶ್ ಪೂಂಜ ಬಂಧನ ಸಾಧ್ಯತೆ ಹಿನ್ನೆಲೆಯಲ್ಲಿ ಸಂಸದ ಕಟೀಲ್ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ಮಾಜಿ ಶಾಸಕರು ಬೆಳ್ತಂಗಡಿಗೆ ದೌಡಾಯಿಸಿದ್ದರು.

- Advertisement -

Latest News

error: Content is protected !!