Saturday, June 6, 2026
Homeತಾಜಾ ಸುದ್ದಿಜುಲೈ 28 ರಂದು ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷದ ಹಿನ್ನೆಲೆಯಲ್ಲಿ ಜನೋತ್ಸವ: ದೊಡ್ಡಬಳ್ಳಾಪುರ ಸಾಧನಾ ಸಮಾವೇಶದಲ್ಲಿ...

ಜುಲೈ 28 ರಂದು ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷದ ಹಿನ್ನೆಲೆಯಲ್ಲಿ ಜನೋತ್ಸವ: ದೊಡ್ಡಬಳ್ಳಾಪುರ ಸಾಧನಾ ಸಮಾವೇಶದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಭಾಗಿ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಮತ್ತು ಬಿಜೆಪಿ ಮೂರು ವರ್ಷಗಳ ಆಡಳಿತ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಜುಲೈ 28 ರಂದು ಜನೋತ್ಸವ ನಡೆಯಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ವತಿಯಿಂದ ಜನೋತ್ಸವದ ಹೆಸರಿನಲ್ಲಿ ಬೃಹತ್ ಸಾಧನಾ ಸಮಾವೇಶ ನಡೆಯಲಿದೆ.

ಸಾಧನಾ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಭಾಗವಹಿಸಲಿದ್ದಾರೆ.‌

ಈ ವೇಳೆ ಬಸವರಾಜ ಬೊಮ್ಮಾಯಿ ಸರ್ಕಾರದ ಒಂದು ವರ್ಷಗಳ ಸಾಧನೆಗಳ ಕುರಿತು ಪುಸ್ತಕಗಳು ಬಿಡುಗಡೆಯಾಗಲಿದ್ದು, ಕೆಲವು ಹೊಸ ಘೋಷಣೆಗಳನ್ನು ಸಿಎಂ ಮಾಡುವ ನಿರೀಕ್ಷೆಯಿದೆ.

ಭಾನುವಾರ ದೊಡ್ಡಬಳ್ಳಾಪುರದಲ್ಲಿ ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ್ದರು.

- Advertisement -

Latest News

error: Content is protected !!