Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರ ಹಾಗೂ ಬೆಳ್ತಂಗಡಿಯ ದ್ವೇಷದ ರಾಜಕಾರಣದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರ ಹಾಗೂ ಬೆಳ್ತಂಗಡಿಯ ದ್ವೇಷದ ರಾಜಕಾರಣದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರ ಹಾಗೂ ಬೆಳ್ತಂಗಡಿಯ ದ್ವೇಷದ ರಾಜಕಾರಣದ ವಿರುದ್ಧ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.ಸಂತೆಕಟ್ಟೆ ಅಯ್ಯಪ್ಪ ಗುಡಿಯಿಂದ ತಾಲೂಕು ಆಡಳಿತಕ್ಕೆ ಸೌಧದವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಭಟನಾ ಭಾಷಣ ಮಾಡಿದರು.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು, ಧಿಕ್ಕಾರ ಘೋಷಣೆಗಳನ್ನೂ ಕೂಗಿದರು.

ರಾಜ್ಯ ಸರ್ಕಾರದಿಂದ ಜನ ಸಾಮಾನ್ಯರ ಲೂಟಿ, ಭ್ರಷ್ಟಾಚಾರ ಹಾಗೂ ಪೆಟ್ರೋಲ್ ಬೆಲೆ ಏರಿಕೆ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ದ್ವೇಷ ರಾಜಕಾರಣದ ಆರೋಪಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಉಸ್ತುವಾರಿ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ ಮತ್ತು ಇತರ ಮುಖಂಡರು ಪಾಲ್ಗೊಂಡಿದ್ದರು.

- Advertisement -

Latest News

error: Content is protected !!