- Advertisement -
![]()
- Advertisement -
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಹನ್ನೊಂದು ಜನ ಆರ್ ಸಿಬಿ ಅಭಿಮಾನಿಗಳ ಸಾವು ಹಿನ್ನೆಲೆಯಲ್ಲಿ ವಿರೋಧ ಪಕ್ಷ ಬಿಜೆಪಿ ಇಂದು ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿತು.
ಮಹಾತ್ಮಾ ಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ ಸೇರಿದಂತೆ ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು.
ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಸೌಧದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.ಇನ್ನು ನಾಳೆ ಘಟನೆ ಸಂಬಂಧ ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಲಿದ್ದು, ರಾಜ್ಯ ಸರ್ಕಾರದ ವಿರುದ್ಧ ದೂರು ನೀಡಲಿದ್ದಾರೆ.
- Advertisement -


