Thursday, June 4, 2026
Homeತಾಜಾ ಸುದ್ದಿಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಹಿನ್ನೆಲೆಯಲ್ಲಿ ಮಂಗಳವಾರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ;...

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಹಿನ್ನೆಲೆಯಲ್ಲಿ ಮಂಗಳವಾರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ವಿಶೇಷ ಅಧಿವೇಶನ ಕರೆಯಲು ಸಿಎಂಗೆ ವಿಪಕ್ಷ ನಾಯಕ ಅಶೋಕ್ ಪತ್ರ

- Advertisement -
- Advertisement -

ಬೆಂಗಳೂರು: ಆರ್ ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಜೂನ್ 17 ರಂದು ಪ್ರತಿಭಟನೆಗೆ ನಿರ್ಧರಿಸಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಿಎಂ ಮತ್ತು ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ ಮಂಗಳವಾರ ಪ್ರತಿಭಟನೆ ನಡೆಯಲಿದ್ದು, ರಾಜ್ಯದ ಎಲ್ಲಾ ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿದಂತೆ ಹತ್ತು ಸಾವಿರ ಜನ ಪತ್ರಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಜೂನ್ 13 ರಂದೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಿಗದಿಯಾಗಿತ್ತು. ಆದರೆ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು.

ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೂಡಾ ಪ್ರತಿಭಟನೆ ನಡೆಯಲಿದ್ದು, ಕಾಲ್ತುಳಿತ ಪ್ರಕರಣದ ಸಂಬಂಧ ವಿಶೇಷ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ಸಿಎಂ ಸಿದ್ದರಾಮಯ್ಯಗೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಪತ್ರವನ್ನೂ ಬರೆದಿದ್ದಾರೆ.

- Advertisement -

Latest News

error: Content is protected !!