- Advertisement -
![]()
- Advertisement -
ಬೆಂಗಳೂರು: ರಸಗೊಬ್ಬರ ಕೊರತೆ ವಿಚಾರವಾಗಿ ನಾಳೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ವಿಪಕ್ಷ ಬಿಜೆಪಿ ನಿರ್ಧರಿಸಿದೆ.ಬಿಜೆಪಿ ರೈತ ಮೋರ್ಛಾ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಾಳೆ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೆಂಗಳೂರಿನಲ್ಲಿ ಇಂದು ಹೇಳಿದ್ದಾರೆ.
ಎರಡು ಹಂತಗಳಲ್ಲಿ ಹೋರಾಟ ನಡೆಸಲು ಬಿಜೆಪಿ ನಿರ್ಧರಿಸಿದ್ದು, ಬೆಂಗಳೂರು ಹೊರತುಪಡಿಸಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಾಳೆ ಪ್ರತಿಭಟನೆ ನಡೆಯಲಿದೆ.
ಮುಂಗಾರು ಬಿರುಸಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿತ್ತನೆ ಕಾರ್ಯ ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಯೂರಿಯಾ ಲಭ್ಯತೆಯಲ್ಲಿ ತೀವ್ರ ಕೊರತೆ ಉಂಟಾಗಿದೆ.
- Advertisement -


