Sunday, June 30, 2024
Homeಕರಾವಳಿಮಂಗಳೂರುವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ; ಮಂಗಳೂರಿನಲ್ಲಿ ಬಿಜೆಪಿಯಿಂದ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ; ಮಂಗಳೂರಿನಲ್ಲಿ ಬಿಜೆಪಿಯಿಂದ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

spot_img
- Advertisement -
- Advertisement -

ಮಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ಅವ್ಯವಹಾರ ಆರೋಪದಡಿ ರಾಜ್ಯವ್ಯಾಪಿ ಇಂದು ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಕೂಡಾ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ ಮತ್ತು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.

ಪ್ರತಿಭಟನೆ ಬಳಿಕ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಮಾರ್ಗ ಮಧ್ಯೆಯೇ ಪೊಲೀಸರು ತಡೆದರು. ಈ ವೇಳೆ
ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನೂಕಾಟ, ತಳ್ಳಾಟ ನಡೆದು ಹೋಯಿತು.

ಒಂದು ಹಂತದಲ್ಲಿ ಪೊಲೀಸ್ ಬ್ಯಾರಿಕೇಡ್ ಭೇಧಿಸಿ ನುಗ್ಗಿದ ಪ್ರತಿಭಟನಾಕಾರರನ್ನು
ಮತ್ತೆ ಆರ್ ಟಿಒ ಕಚೇರಿ ಮುಂಭಾಗ ತಡೆದ ಪೊಲೀಸರು, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಇದೇ ವೇಳೆ ನಳಿನ್ ಕುಮಾರ್ ಕಟೀಲ್ ರನ್ನು ವಶಕ್ಕೆ ಪಡೆದ ಕಾರನ್ನು ಬಿಜೆಪಿ ಮಹಿಳಾ ಕಾರ್ಯಕರ್ತರು ಅಡ್ಡಗಟ್ಟಿದ ಘಟನೆಯೂ ನಡೆಯಿತು.

- Advertisement -
spot_img

Latest News

error: Content is protected !!