Thursday, June 4, 2026
Homeಕರಾವಳಿಮಂಗಳೂರುಮಂಗಳೂರು:ವಕ್ಪ್ ಆಸ್ತಿ ನೋಂದಣಿ ವಿರೋಧಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ

ಮಂಗಳೂರು:ವಕ್ಪ್ ಆಸ್ತಿ ನೋಂದಣಿ ವಿರೋಧಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ

- Advertisement -
- Advertisement -

ಮಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿ ನೋಂದಣಿ ವಿರೋಧಿಸಿ ಮಂಗಳೂರಿನಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.

ಮಂಗಳೂರು ನಗರದ ಪುರಭವನದ ಎದುರಿನ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಮತ್ತು ರಾಜೇಶ್ ನಾಯ್ಕ್ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭಾಗವಹಿಸಿದ್ದರು

ಸಂಜೆವರೆಗೆ ನಡೆದ ಪ್ರತಿಭಟನೆಗೂ ಮುನ್ನ ಧರಣಿ ಸತ್ಯಾಗ್ರಹ ನಡೆಸಲಿರುವ ಬಿಜೆಪಿ ಮುಖಂಡರು ಅಂಬೇಡ್ಕರ್ ಪ್ರತಿಮಗೆ ಮಾಲಾರ್ಪಣೆ ಮಾಡಿದರು‌.

ಪ್ರತಿಭಟನೆ ವೇಳೆ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ‌ ನಡೆಸಿದ ಬಿಜೆಪಿ ಮುಖಂಡರು, ರಾಜ್ಯದಲ್ಲಿ ಕಾಂಗ್ರೆಸ್ ಟಿಪ್ಪು ಸುಲ್ತಾನ್ ಮಾದರಿಯ ಆಡಳಿತ ನಡಸುತ್ತಿದೆ ಎಂದು ಆರೋಪಿಸಿದರಲ್ಲದೇ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.

- Advertisement -

Latest News

error: Content is protected !!