Saturday, August 29, 2026
Homeಕರಾವಳಿಉಡುಪಿಉಡುಪಿಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಉದ್ಘಾಟನೆ

ಉಡುಪಿಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಉದ್ಘಾಟನೆ

- Advertisement -
- Advertisement -

ಉಡುಪಿ: ಉಡುಪಿಯ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರಾಜ್ಯ ಪದಾಧಿಕಾರಿಗಳ ಸಭೆ ಉದ್ಘಾಟಿಸಿದರು.

ಪದಾಧಿಕಾರಿಗಳ ಉದ್ಘಾಟನೆಗೂ ಮುನ್ನ ಮಣಿಪಾಲದ ನೆಹರು ನಗರ ನಿವಾಸಿ ಅಪ್ಪಿ ಎಂಬ ಕೊರಗ ಸಮುದಾಯದ ಮಹಿಳೆಗೆ ಮನೆ ಹಸ್ತಾಂತರ ಮಾಡಲಾಯಿತು.

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ಮಹತ್ವ ಪಡೆದಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ 75ಕ್ಕೂ ಅಧಿಕ ಪದಾಧಿಕಾರಿಗಳು ಭಾಗಿಯಾಗಿದ್ದಾರೆ.

ಸಂಜೆಯವರೆಗೂ ಸಭೆ ನಡೆಯಲಿದ್ದು ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ಸೇರ್ಪಡೆಯಾದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕೂಡಾ ಭಾಗಿಯಾಗಿದ್ದಾರೆ.

- Advertisement -

Latest News

error: Content is protected !!