Friday, June 26, 2026
Homeಕರಾವಳಿಮಂಗಳೂರುವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶ್ರೀ...

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

- Advertisement -
- Advertisement -

ಬೆಳ್ತಂಗಡಿ : ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್‌ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್‌ ಪಿ) ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ ಕೈಬಿಟ್ಟು ಜೂ.26 ರಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ವಿಶೇಷ ಪೂಜೆ ಬಳಿಕ ಸಾಮೂಹಿಕವಾಗಿ ಪ್ರಾರ್ಥನೆ ಮಾಡಿbವಿಜಯೇಂದ್ರ ಒಂದು ಸಾವಿರದ ಒಂದು ರೂಪಾಯಿ ಕಾಣಿಕೆಯನ್ನು ಹುಂಡಿಗೆ ಹಾಕಿದರು .

ಬಳಿಕ ಧಮಾ೯ಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕರುಗಳಾದ ಹರೀಶ್ ಪೂಂಜ, ಯಶಪಾಲ್ ಸುವರ್ಣ, ರಾಜೇಶ್ ನಾಯ್ಕ, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಲ್ಯ ಸೇರಿದಂತೆ ಕರಾವಳಿ ಭಾಗದ ಶಾಸಕರು, ಬಿಜೆಪಿ ಮಂಡಲ ಅಧ್ಪಕ್ಷ ಶ್ರೀನಿವಾಸ ರಾವ್ ಹಾಗೂ.ಪ್ರಮುಖ ನಾಯಕರುಗಳಾದ ಜಯಂತ್ ಕೋಟ್ಯಾನ್, ಜಯಂತ್ ಗೌಡ, ದಿನೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!