Saturday, June 27, 2026
Homeಕರಾವಳಿಮಂಗಳೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ:ಮೆರವಣಿಗೆ ಮೂಲಕ ದ.ಕ. ಬಿಜೆಪಿಯಿಂದ ಅದ್ಧೂರಿ ಸ್ವಾಗತ

ಮಂಗಳೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ:ಮೆರವಣಿಗೆ ಮೂಲಕ ದ.ಕ. ಬಿಜೆಪಿಯಿಂದ ಅದ್ಧೂರಿ ಸ್ವಾಗತ

- Advertisement -
- Advertisement -

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮಂಗಳೂರಿಗೆ ಭೇಟಿ ನೀಡಿದ್ದಾರೆ.ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯೇಂದ್ರಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯಿಂದ ಪುಷ್ಪವೃಷ್ಟಿ, ಚೆಂಡೆ ವಾದನ, ಬ್ಯಾಂಡ್ ಜೊತೆಗೆ ಬೊಂಬೆಯಾಟದ ಮೆರುಗಿನೊಂದಿಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.

ಮಂಗಳೂರು ಏರ್ ಪೋರ್ಟ್ ನಿಂದ ನೇರವಾಗಿ ವಿಜಯೇಂದ್ರ ಅವರನ್ನು ಬಂಟ್ಸ್ ಹಾಸ್ಟೆಲ್ ಬಳಿ ಇರುವ ದಕ್ಷಿಣ ಕನ್ನಡ ಬಿಜೆಪಿ ಚುನಾವಣಾ ಕಾರ್ಯಾಲಯಕ್ಕೆ ಮೆರವಣಿಗೆ ಮೂಲಕ ಕರೆತರಲಾಯಿತು.

ನಿಕಟಪೂರ್ವ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ್ ಮತ್ತು ರಾಜೇಶ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಸ್ವಾಗತ ಕೋರಿದರು.

ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಜಯೇಂದ್ರ ಬಳಿಕ ಸಿ.ವಿ. ನಾಯಕ್ ಹಾಲ್ ನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು.

- Advertisement -

Latest News

error: Content is protected !!