Monday, June 8, 2026
Homeಕರಾವಳಿನಾಳೆ ಬೆಳಗ್ಗೆ ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

ನಾಳೆ ಬೆಳಗ್ಗೆ ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

- Advertisement -
- Advertisement -

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಳೆ ಬೆಳಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಇಂದು ರಾತ್ರಿ ಧರ್ಮಸ್ಥಳದಲ್ಲಿ ವಾಸ್ತವ್ಯ ಹೂಡಿರುವ ವಿಜಯೇಂದ್ರ ನಾಳೆ ಬೆಳಗ್ಗೆ 8.30ಕ್ಕೆ ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ದೇವರ ದರ್ಶನದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಲಿರುವ ವಿಜಯೇಂದ್ರ ಅನಂತರ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ‌ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲು ಇಂದು ವಿಜಯೇಂದ್ರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದರು.

- Advertisement -

Latest News

error: Content is protected !!