Wednesday, June 3, 2026
Homeತಾಜಾ ಸುದ್ದಿನಾಳೆ ಮಂಗಳೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

ನಾಳೆ ಮಂಗಳೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

- Advertisement -
- Advertisement -

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ.ಮಂಗಳೂರಿನ ಸಿ.ವಿ. ನಾಯಕ್ ಹಾಲ್ ನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿದ್ದು, ಸಭೆಯಲ್ಲಿ ವಿಜಯೇಂದ್ರ ಪಾಲ್ಗೊಳ್ಳಲಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ವಿಜಯೇಂದ್ರ ಸ್ವಾಗತಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ.

ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ವಿಜಯೇಂದ್ರ ಮಂಗಳೂರಿನಲ್ಲಿ ಕೆಲವು ಖಾಸಗಿ ಕಾರ್ಯಕ್ರಮಗಳಲ್ಲೂ ಭಾಗವಹಿಸಲಿದ್ದಾರೆ.

- Advertisement -

Latest News

error: Content is protected !!