Sunday, May 12, 2024
Homeತಾಜಾ ಸುದ್ದಿಬಿಜೆಪಿ ರಾಜ್ಯಾಧ್ಯಕ್ಷರ ಅವಧಿಯೂ ವಿಸ್ತರಣೆಯಾಗುತ್ತಾ? ಕಟೀಲ್‌ ಅವಧಿ ವಿಸ್ತರಣೆ ಬಗ್ಗೆ ಬಿಜೆಪಿ ಹೈಕಮಾಂಡ್‌ ನಿಲುವೇನು?

ಬಿಜೆಪಿ ರಾಜ್ಯಾಧ್ಯಕ್ಷರ ಅವಧಿಯೂ ವಿಸ್ತರಣೆಯಾಗುತ್ತಾ? ಕಟೀಲ್‌ ಅವಧಿ ವಿಸ್ತರಣೆ ಬಗ್ಗೆ ಬಿಜೆಪಿ ಹೈಕಮಾಂಡ್‌ ನಿಲುವೇನು?

spot_img
- Advertisement -
- Advertisement -

ಬೆಂಗಳೂರು: ನಿನ್ನೆ(ಮಂಗಳವಾರ) ನಡೆದ ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜೆಪಿ ನಡ್ಡಾ ಅವರ ರಾಷ್ಟ್ರೀಯ ಅಧ್ಯಕ್ಷರ ಅವಧಿಯನ್ನು ಜೂನ್ 2024 ರವರೆಗೆ ವಿಸ್ತರಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಅವಧಿಯೂ ವಿಸ್ತರಣೆಯಾಗುತ್ತಾ ಎಂಬ ಕುತೂಹಲ ಹೆಚ್ಚಿದೆ. 

ಪ್ರಧಾನಿ ನರೇಂದ್ರ ಮೋದಿ ಜನವರಿ 19ರ ರಾಜ್ಯ ಪ್ರವಾಸದ ಬಳಿಕ ಸಂಘಟನೆಯಲ್ಲಿ ಕೆಲ ಬದಲಾವಣೆ ತರಲು ಹೈಕಮಾಂಡ್ ಮುಂದಾಗುವ ಸಾಧ್ಯತೆ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ. ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಮುಂದುವರಿಕೆ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆ ಇಲ್ಲ. ಹೈಕಮಾಂಡ್ ಕೂಡಾ ಯಾವುದೇ ಘೋಷಣೆ ಮಾಡಿಲ್ಲ. ಈ ತಿಂಗಳ ಅಂತ್ಯದಲ್ಲೇ ಎಲ್ಲಾ ಕುತೂಹಲಗಳಿಗೆ ಬಿಜೆಪಿ ಹೈಕಮಾಂಡ್ ತೆರೆ ಎಳೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!